ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ರಾಘವೇಂದ್ರ ಮಂಗಲ ಕಾರ್ಯಾಲಯದಲ್ಲಿ ಜ.೫ ರಂದು ಬೆಳಿಗ್ಗೆ ೧೧ ಗಂಟೆಗೆ ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಲೇಬಗಿರಿ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ನಾಗಮೂರ್ತೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ಮುರನಾಳದ ಮಹಾ ಪರುಷ ಮಳೆರಾಜೇಂದ್ರಸ್ವಾಮಿ ಮಠದ ಜಗನ್ನಾಥ ಮಹಾಸ್ವಾಮಿಗಳು, ನಾಲತವಾಡದ ಬ್ರಹ್ಮಾಂಡಭೇರಿ ಮಠದ ಪಂಪಾಪತಿ ಮಹಾಸ್ವಾಮಿಗಳು, ವಿಜಯಪುರದ ಮೂರುಝಾವದ ಮಠದ ಮಹೇಂದ್ರ ಮಹಾಸ್ವಾಮಿಗಳು, ದೇವರ ಹಿಪ್ಪರಗಿಯ ಮೂರುಝಾವದ ಶಾಖಾ ಮಠದ ದೇವೆಂದ್ರ ಮಹಾಸ್ವಾಮಿಗಳು, ಸಾಸನೂರಿನ ಮೂರುಝಾವದ ಮಠದ ಶ್ರೀಶೈಲ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.
ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಾವೂರಿನ ಪ್ರಭಾಕರ ಪತ್ತಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಯಚೂರಿನ ಪತ್ರಕರ್ತರಾದ ಮಾರುತಿ ಬಡಿಗೇರ, ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆನಂದ ಲಕ್ಷ್ಮಿಪುರ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾದ ಉಪಾಧ್ಯಕ್ಷರಾದ ಪ್ರಮೋದ ಬಡಿಗೇರ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಮಾಟಲದಿನ್ನಿ, ಕಸಬಾ ಲಿಂಗಸ್ಗೂರಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಳಪ್ಪ ಬಡಿಗೇರ ಆಗಮಿಸುವರು. ಉಪನ್ಯಾಸಕರಾಗಿ ಎಂಜಿವ್ಹಿಸಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿ.ಎಸ್.ಲಮಾಣಿ ವಿಶೇಷ ಉಪನ್ಯಾಸಕರಾಗಿ ಆಗಮಿಸಲಿದ್ದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಬೇಕು ಎಂದು ತಾಲೂಕು ವಿಶ್ವಕರ್ಮ ಸಮಾಜದ ಪ್ರಕಟಣೆ ತಿಳಿಸಿದೆ.
