ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ವೆಲ್ಡಿಂಗ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಯು ಚಾಲ್ತಿಯಲ್ಲಿರುವ ಕಾರ್ಮಿಕರ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಜ.೦೩ ರಿಂದ ಜ.೧೮ರ ಒಳಗಾಗಿ, ಈ ಕೆಳಕಂಡ ಷರತ್ತುಗಳ ಅನ್ವಯ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಸದರಿ ಅರ್ಜಿಯನ್ನು ಬಂದಾಳ ರಸ್ತೆಯ ಬಮ್ಮಣ್ಣಿ ಬಿಲ್ಡಿಂಗ್ ಸಿಂದಗಿ ಕಛೇರಿಯಲ್ಲಿ ಸಲ್ಲಿಸಬೇಕು. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು ಎಂದು ಎಂದು ತಾಲೂಕು ಕಾರ್ಮಿಕ ನಿರೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
