ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್ ಬಿ ಐ ಹಾಗೂ ಇತರ ಬ್ಯಾಂಕ್ ಅಧಿಕಾರಿ, ಗುಮಾಸ್ತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು 45 ದಿನಗಳ ತರಬೇತಿಯನ್ನು ಮೈಸೂರು ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.
ಆಸಕ್ತರು ಜನವರಿ 8ರ ಸಂಜೆ 4ಗಂಟೆಯೊಳಗಾಗಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
