ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾವಿತ್ರಿಬಾಯಿ ಫುಲೆ ಅವರು ಅವರು ಸ್ವಾತಂತ್ರö್ಯ ಪೂರ್ವದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ದುಡಿದರು. ಸಗಣಿ, ಕಲ್ಲುಗಳಿಂದ ಹೊಡೆಸಿಕೊಂಡು ಅವಮಾನಗಳನ್ನು ಸಹಿಸಿದರು. ಶಿಕ್ಷಣ ನೀಡಿ ಮಾತೆಯಾದರು. ಅವರ ಕೆಲಸವು ಭಾರತದಲ್ಲಿ ಮಹಿಳಾ ಹಕ್ಕುಗಳ ಚಳುವಳಿಗೆ ಅಡಿಪಾಯ ಹಾಕಿತು, ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡಿತು ಎಂದು ಬಂಜಾರಾ ಪ್ರೌಢ ಶಾಲೆಯ ಶಿಕ್ಷಕಿ ಜೆ.ಕೆ.ರಾಠೋಡರವರು ಹೇಳಿದರು.
ನಗರದ ಬಂಜಾರಾ ಪ್ರೌಢ ಶಾಲೆಯಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ‘ಸಾವಿತ್ರಿಬಾಯಿ ಫುಲೆ’ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಭಾರತದ ಹೆಸರಾಂತ ಮಹಿಳಾ ಶಿಕ್ಷಣದ ಪ್ರವರ್ತಕರಲ್ಲಿ ಒಬ್ಬರಾದ ‘ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ’ ಭಾರತದ ಮೊದಲ ಮಹಿಳಾ ಶಿಕ್ಷಕಿ, ಸ್ತ್ರೀವಾದಿ ಮತ್ತು ಸಮಾಜ ಸುಧಾರಕ ಅವರ ಜನ್ಮದಿನವನ್ನು ಗುರುತಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಮಾತನಾಡುತ್ತ. ಸಾವಿತ್ರಿ ಬಾಯಿ ಫುಲೆ, ಸ್ವತಂತ್ರ ಪೂರ್ವ ಭಾರತದಲ್ಲಿ ಮಹಾರಾಷ್ಟ್ರ ರಾಜ್ಯದ ಒಬ್ಬ ಭಾರತೀಯ ಸುಧಾರಕ, ಕವಿ ಮತ್ತು ಶಿಕ್ಷಣ ತಜ್ಞರಾಗಿದ್ದರು. ಅವರು ಭಾರತದಲ್ಲಿ ಮೊದಲ ಮಹಿಳಾ ಶಾಲೆಯನ್ನು ತೆರೆದ ಮೊದಲ ಮಹಿಳಾ ಶಿಕ್ಷಕಿ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ನಿರಂತರವಾಗಿ ಹೋರಾಡಿದರು ಮತ್ತು ಶಿಕ್ಷಣದ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿದರು ಎಂದರು.
ಈ ವೇಳೆಯಲ್ಲಿ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

