ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ರೂಪಾಯಿಗೆ ೮೦ ರೂಪಾಯಿ ನೀಡುವ ಕರಾರಿನ ಮೇರೆಗೆ ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಓಸಿ ಜೂಜಾಟವಾಡುತ್ತಿದ್ದ ವ್ಯಕ್ತಿಯ ಮೇಲೆ ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ಪ್ರಕರಣವನ್ನು ದಾಖಲಿಸಿದ್ದಾರೆ.
ತಾಲೂಕಿನ ಬಸರಕೋಡ ಗ್ರಾಮದ ಗುರಣ್ಣ ಸಂಗನಗೌಡ ಮಂಕಣಿ ಈತನು ಪಟ್ಟಣದ ಬಸ್ ನಿಲ್ದಾಣದಲ್ಲಿರುವ ನಂದಿನಿ ಮಿಲ್ಕ ಪಾರ್ಲರ್ ಬಳಿ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿದ್ದು ಈತನಿಂದ ಕೆಲ ಹಣ, ಓಸಿ ಚೀಟಿ ಮತ್ತು ಬಾಲ್ ಪೆನ್ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
