ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಜ.5 ರಂದು ಸಂಜೆ 5:30ಕ್ಕೆ ಮುದ್ದೇಬಿಹಾಳ ಕ್ರಿಕೇಟ್ ಪ್ರೀಮಿಯರ್ ಲೀಗ್ ಸೀಸನ್-7 ನ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗಳ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ, ಸೀಸನ್ ನ ರೂವಾರಿ ಕಾಮರಾಜ ಬಿರಾದಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಮತ್ತು ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ಧಲಿಂಗ ದೇವರು ವಹಿಸಿಕೊಳ್ಳಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪಂದ್ಯಾವಳಿಯ ಪ್ರಥಮ ಬಹುಮಾನ ವಿತಕರಕರಾದ ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ ಮತ್ತು ಕರ್ನಾಟಕ ಯುತ್ ಕಾಂಗ್ರೇಸ್ ನ ಪ್ರಾಧಾನ ಕಾರ್ಯದರ್ಶಿ ಸತ್ಯಜಿತ್ ಪಾಟೀಲ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ವಿ.ಎಂ.ನಾಗಠಾಣ ವಕೀಲರು, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಕಾಳಗಿ ಗ್ರಾ.ಪಂ ಮಾಜಿ ಅಧ್ಯಕ್ಷ ಜಾವೇದ ಇನಾಮದಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ದೇವಿಕಾ ಸುಬ್ಬರಾವ ಫೌಂಡೇಶನ ಸಂಸ್ಥಾಪಕಿ ಪಲ್ಲವಿ ನಾಡಗೌಡ, ಅಹಿಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಸೇರಿದಂತೆ ಹಲವು ಮಹನೀಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ನಮ್ಮೂರಿನ ಹೆಮ್ಮೆಯ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಎಲ್ಲ ಮಹನೀಯರು, ಕ್ರಿಕೇಟ್ ಪ್ರೀಯರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಪ್ರಮುಖರಾದ ಶಿವಾನಂದ ವಾಲಿ, ಬಿ.ಕೆ.ರಕ್ಕಸಗಿ, ಸಂಗು ಚಲವಾದಿ, ರಂಜಾನ ನದಾಫ್, ಯಲ್ಲಪ್ಪ ಮ್ಯಾಗೇರಿ, ಝಾಕೀರ ಬಾಗವಾನ, ನಜೀರ ದಾಂಡಿಯಾ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.

