Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ
(ರಾಜ್ಯ ) ಜಿಲ್ಲೆ

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಕುರಿತು ಜರುಗಿದ ಜಿಲ್ಲಾಮಟ್ಟದ ಟಾಸ್ಕ ಪೋರ್ಸ್ ಸಮಿತಿ ಸಭೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಜನವರಿ 3ರ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರತಿ ಕ್ವಿಂಟಾಲ್ ತೊಗರಿ ಬೆಲೆಯನ್ನು ರೂ .7550/- ನಂತೆ ಪ್ರತಿ ರೈತನಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಸಲು ಆದೇಶ ನೀಡಲಾಯಿತು.
ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ, ಬಯೋಮೆಟ್ರಿಕ್ ಮೂಲಕ ತೊಗರಿ ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸಬೇಕು. NIC ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸದರಿ ನೋಂದಣಿ ತಂತ್ರಾಂಶವು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ. UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ. ಸದರಿ ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ಮಾಡಲು ನೋಂದಣಿ ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನಾಫೆಡ್ ಹಾಗೂ ಎನ್.ಸಿ.ಸಿ.ಎಫ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು. ನಾಫೆಡ್ ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ತೊಗರಿ ಖರೀದಿ ಕೇಂದ್ರಗಳಿಂದ ಖರೀದಿಸತಕ್ಕದ್ದು.

  1. ಸದರಿ ಯೋಜನೆಯಡಿಯಲ್ಲಿ ಖರೀದಿಸಬಹುದಾದ ಗರಿಷ್ಠ ತೊಗರಿ ಪ್ರಮಾಣ ಹಾಗೂ ಅವಶ್ಯವಿರುವ ಮುಂಗಡ ಹಣವನ್ನು ರಾಜ್ಯದ ಖರೀದಿ ಸಂಸ್ಥೆಗಳು ನ್ಯಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ಹಣ ಪಡೆದು ಖರೀದಿಸಿರುವ ರೈತರಿಗೆ ಡಿ.ಬಿ.ಟಿ ಮುಖಾಂತರ ಪಾವತಿಸತಕ್ಕದ್ದು.
  2. ಈ ಆದೇಶ ಹೊರಡಿಸಿದದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 75 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸತಕ್ಕದ್ದು.
    ಈ ಯೋಜನೆಗಾಗಿ ಕೇಂದ್ರ ಸರ್ಕಾರವು ಹೊರಡಿಸಿರುವ Standard operating procedure (SOP) ರನ್ವಯ ಖರೀದಿಸತಕ್ಕದ್ದು,
  3. ಈ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಈ ಮೇಲ್ ಮೂಲಕ ಸಲ್ಲಿಸತಕ್ಕದ್ದು,
  4. ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರಿಂದ ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿ ಸಂಗ್ರಹಿಸಿಡುವುದು. ಪಡೆದು ಪರಿಶೀಲಿಸಿ ನೋಂದಾಯಿಸಿಕೊಳ್ಳತಕ್ಕದ್ದು ಹಾಗೂ ದಾಖಲೆಗಳನ್ನು
  5. ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಅಥವಾ ರೈತರು ನೀಡಿರುವ ಬ್ಯಾಂಕ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು DBT/NEFT ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು.
  6. ತೊಗರಿ ಖರೀದಿ ಕೇಂದ್ರದಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ತೊಗರಿಯನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಹಾಗೂ ಖರೀದಿ ಕೇಂದ್ರಗಳಲ್ಲಿ ತೊಂದರೆಗಳು ಉದ್ಭವಿಸಿದಲ್ಲಿ ಸಂಬಂಧಿಸಿದ ಕಾರ್ಯದರ್ಶಿಗಳು ಹಾಗೂ ಸಂಘಗಳ ವಿರುದ್ಧ ಸೂಕ್ತ ಕ್ರಮ ವಹಿಸುವಂತೆ ಮತ್ತು ವರದಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು, ವಿಜಯಪುರ ರವರು ಕ್ರಮ ವಹಿಸತಕ್ಕದ್ದು.
    ಈ ತೊಗರಿಯನ್ನು ಖರೀದಿ ಪೂರ್ವದಲ್ಲಿ ಖರೀದಿ ಕೇಂದ್ರಗಳಾದ PACS/VSSN/FPO/TAPCMS ಸಂಘಗಳು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ವಿಜಯಪುರ ಅವರೊಂದಿಗೆ ಒಪ್ಪಿಗೆ ಪತ್ರ (Agreement) ಮಾಡಿಕೊಂಡು ನಂತರ ಖರೀದಿಸಲು ಸೂಚಿಸಿದೆ.
  7. ರೈತರು ಹೊಗರಿ ಕಾಳು, ಖರೀದಿ ಕೇಂದ್ರಕ್ಕೆ ತಂದು ತಮ್ಮ ಉಪಸ್ಥಿತಿಯಲ್ಲಿಯೇ ತೂಕ ಮಾಡಿಕೊಳ್ಳಬೇಕು. ಆಧೀಕೃತ ರಿಶಿದೀಯನ್ನು ಪಡೆದುಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ತೊಗರಿ ಕಾಳು ಇಳಿಸುವ ಜವಾಬ್ದಾರಿ ರೈತರದ್ದಾಗಿರುತ್ತದೆ ಎಂಬ ನಿಬಂಧನೆಗಳನ್ನು ವಿಧಿಸಲಾಗಿದೆ.
    ಮೇಲ್ಕಂಡ ಎಲ್ಲ ಅಂಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ರೈತರಿಗೆ ಅನ್ಯಾಯವಾಗದಂತೆ ಸರ್ಕಾರದ ಯೋಜನೆಯನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುಲು ಹಾಗೂ ಆಯಾ ತಾಲೂಕಿನ ಸಹಕಾರಿ ಸಂಘಗಳ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ಸುಗಮವಾಗಿ ಜರುಗಿಸಲು ಸಂಬಂಧಿಸಿದ ಸ್ಥಳಿಯ ಸಂಸ್ಥೆ ಹಾಗೂ ಖರೀದಿ ಏಜೆನ್ಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
    ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರು, ಕೆ.ಎಸ್.ಸಿ.ಎಮ್.ಎಫ್ ಶಾಖಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಮಾರುಕಟ್ಟೆ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.