ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಂಕ್ರಾಂತಿ ನಿಮಿತ್ಯ ತೊರವಿ ಗ್ರಾಮದಲ್ಲಿ ನಡೆಯುವ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಜನವರಿ 10 ರಿಂದ 16ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಜಾತ್ರೆಯ ವ್ಯವಸ್ಥೆ ಬಗ್ಗೆ ಪೂರ್ವಭಾವಿ ಸಭೆ ಜನವರಿ 7ರ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯು ತಿಳಿಸಿದೆ.
