Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೫ ರಂದು ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನೋತ್ಸವ
(ರಾಜ್ಯ ) ಜಿಲ್ಲೆ

ಜ.೫ ರಂದು ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನೋತ್ಸವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ರಾಘವೇಂದ್ರ ಮಂಗಲ ಕಾರ್ಯಾಲಯದಲ್ಲಿ ಜ.೫ ರಂದು ಬೆಳಿಗ್ಗೆ ೧೧ ಗಂಟೆಗೆ ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದ ಎಲ್ಲ ಬಾಂಧವರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಿಶ್ವಕರ್ಮ ಸಮಾಜದ ಮುಖಂಡ ಬಸವರಾಜ ಹಡಗಲಿ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಲೇಬಗಿರಿ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ನಾಗಮೂರ್ತೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ಮುರನಾಳದ ಮಹಾ ಪರುಷ ಮಳೆರಾಜೇಂದ್ರಸ್ವಾಮಿ ಮಠದ ಜಗನ್ನಾಥ ಮಹಾಸ್ವಾಮಿಗಳು, ನಾಲತವಾಡದ ಬ್ರಹ್ಮಾಂಡಭೇರಿ ಮಠದ ಪಂಪಾಪತಿ ಮಹಾಸ್ವಾಮಿಗಳು, ವಿಜಯಪುರದ ಮೂರುಝಾವದ ಮಠದ ಮಹೇಂದ್ರ ಮಹಾಸ್ವಾಮಿಗಳು, ದೇವರ ಹಿಪ್ಪರಗಿಯ ಮೂರುಝಾವದ ಶಾಖಾ ಮಠದ ದೇವೆಂದ್ರ ಮಹಾಸ್ವಾಮಿಗಳು, ಸಾಸನೂರಿನ ಮೂರುಝಾವದ ಮಠದ ಶ್ರೀಶೈಲ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ಉದ್ಘಾಟಿಸಲಿದ್ದು, ಬಾವೂರಿನ ಪ್ರಭಾಕರ ಪತ್ತಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಯಚೂರಿನ ಪತ್ರಕರ್ತರಾದ ಮಾರುತಿ ಬಡಿಗೇರ, ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆನಂದ ಲಕ್ಷ್ಮಿಪುರ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾದ ಉಪಾಧ್ಯಕ್ಷರಾದ ಪ್ರಮೋದ ಬಡಿಗೇರ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಮಾಟಲದಿನ್ನಿ, ಕಸಬಾ ಲಿಂಗಸ್ಗೂರಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಳಪ್ಪ ಬಡಿಗೇರ ಆಗಮಿಸುವರು. ಎಂಜಿವ್ಹಿಸಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿ.ಎಸ್.ಲಮಾಣಿ ವಿಶೇಶ ಉಪನ್ಯಾಸಕರಾಗಿ ಆಗಮಿಸಲಿದ್ದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ವಿನಂತಿಸಿದರು.
ಸಮಾಜದ ಹಿರಿಯರಾದ ಪ್ರಭಾಕರ ಪತ್ತಾರ ಅವರು ಮಾತನಾಡಿ ನಿಂತರ ಮೂರು ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತ ಬಂದಿದ್ದೇವೆ. ಸುತ್ತಮುತ್ತಲಿನ ಹಳ್ಳಿಗಳ ಸಮಾಜದ ಎಲ್ಲ ಕುಲ ಬಾಂಧವರು ಕುಟುಂಬ ಸಮೇತ ಆಗಮಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕು ಎಂದು ಮನವಿ ಮಾಡಿಕೊಂಡರು.
ಈ ವೇಳೆ ಸಮಾಜದ ಪ್ರಮುಖರಾದ ಈರಣ್ಣ ಬಡಿಗೇರ, ಗಂಗಾಧರ ಸೋನಾರ, ಸದಾಶಿವ ಬಡಿಗೇರ, ಮೌನೇಶ ಮಡಿಕೇಶ್ವರ, ವಿಠ್ಠಲ ಬಡಿಗೇರ, ಶೇಷಪ್ಪ ಬಡಿಗೇರ, ಶಿವು ಬಡಿಗೇರ, ವಿರೇಶ ಬಡಿಗೇರ, ಹಣಮಂತ ಬಡಿಗೇರ, ಬಾಲಚಂದ್ರ ಬಡಿಗೇರ, ರಾಮಚಂದ್ರ ಬಡಿಗೇರ, ಮನೋಹರ ಬಡಿಗೇರ, ವಿವೇಕ ದೋಟಿಹಾಳ, ಈರಣ್ಣ ಹಂದ್ರಾಳ, ವಿಜು ಸೋನಾರ, ಬಸವರಾಜ ಬಡಿಗೇರ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.