Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿವಾಸ ಮುತ್ತಿಗೆಗೆ ಯತ್ನ
(ರಾಜ್ಯ ) ಜಿಲ್ಲೆ

ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿವಾಸ ಮುತ್ತಿಗೆಗೆ ಯತ್ನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗುತ್ತಿಗೆದಾರ ಸಚಿನ್ ಪಾಂಚಲ್ ಆತ್ಮಹತ್ಯೆ ಪ್ರಕರಣ | ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಕಲಬುರಗಿ: ಬೀದರ್ ಮೂಲದ ಸಿವಿಲ್ ಗುತ್ತಿಗೆದಾರ ಸಚಿನ್ ಪಾಂಚಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡರು. ಪೊಲೀಸ್ ಬಿಗಿ ಭದ್ರತೆ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಿಯಾಂಕ್ ಖರ್ಗೆ ಅವರ ನಿವಾಸದ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯಿಂದ ಸುಸ್ತಾಗಿ ಬರುವ ಬಿಜೆಪಿ ನಾಯಕರಿಗೆ ತೆಂಗಿನಕಾಯಿ, ಕಾಫಿ, ಟೀ, ಕುಡಿಯುವ ನೀರಿನ ಬಾಟಲಿ ನೀಡುವ ಮೂಲಕ ಉಪಚರಿಸಿದದ್ದು ವಿಶೇಷವಾಗಿ ಗಮನ ಸೆಳೆಯಿತು.

ಪ್ರತಿಪಕ್ಷಗಳ ಒತ್ತಡದ ತಂತ್ರಕ್ಕೆ ಮಣಿಯುವುದಿಲ್ಲ :ಖರ್ಗೆ

ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಪ್ರತಿಪಕ್ಷಗಳ ಬೇಡಿಕೆ ಮತ್ತು ಒತ್ತಡದ ತಂತ್ರಕ್ಕೆ ನಾನಾಗಲೀ ಅಥವಾ ಸರಕಾರವಾಗಲೀ ಮಣಿಯುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಹಲವು ಪ್ರಕರಣಗಳಿವೆ ಎಂದು ಹೇಳಿದರು.

ಕಾಪನೂರ ಮೇಲೆ ಕಠಿಣ ಕ್ರಮಕ್ಕೆ ಡೆತ್ ನೋಟ್ ನಲ್ಲಿ ಉಲ್ಲೇಖ

ಡಿಸೆಂಬರ್ 26 ರಂದು ಬೀದರ್ ಜಿಲ್ಲೆಯಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ರಾಜು ಕಾಪನೂರ ಅವರು ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಕಪನೂರ ಅವರಿಗೆ ಒಂದು ಕೋಟಿ ರೂಪಾಯಿ ನೀಡುವಂತೆ ಕೊಲೆ ಬೆದರಿಕೆ ಹಾಕಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಡೆತ್ ನೋಟ್ ನಲ್ಲಿ ತಮ್ಮ ಹೆಸರು ಇಲ್ಲದ ಕಾರಣ ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿರುವ ಪ್ರಿಯಾಂಕ್ ಖರ್ಗೆ, ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.