ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಸ್ವಾಗತಕೊರುವ ‘ಆರಂಭ ೨೦೨೫’ ಕಾರ್ಯಕ್ರಮವನ್ನು ಇದೇ ದಿ. ೬ ರಂದು ಬೆಳಗ್ಗೆ ೧೧:೦೦ ಗಂಟೆಗೆ ವಿಭಾಗದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರದ ಪ್ರಜಾವಾಣಿ ದಿನಪತ್ರಿಕೆಯ ಹಿರಿಯ ಜಿಲ್ಲಾ ವರದಿಗಾರ ಬಸವರಾಜ ಸಂಪಳ್ಳಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ್ ಕಾಕಡೆ ವಹಿಸಲಿದ್ದಾರೆ. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

