Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಾತ್ಮಕ ಚಿತ್ರದಲ್ಲಿ ಅರಳಿದ ಮತದಾನದ ಮಹತ್ವ
(ರಾಜ್ಯ ) ಜಿಲ್ಲೆ

ಕಲಾತ್ಮಕ ಚಿತ್ರದಲ್ಲಿ ಅರಳಿದ ಮತದಾನದ ಮಹತ್ವ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸ್ವೀಪ್ ಸಮಿತಿ ವತಿಯಿಂದ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಕಲಾತ್ಮಕ ಚಿತ್ರಗಳನ್ನು ಬಿಡಿಸಿ, ಮತದಾನದ ಸಂದೇಶ ಸಾರುವ ಚಿತ್ರಗಳನ್ನು ಬಿಡಿಸುವುದರ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಕಲಾತ್ಮಕ ಚಿತ್ರ ಬಿಡಿಸುವ ಕಾರ್ಯಕ್ರಮದಲ್ಲಿ ನೂತನವಾಗಿ ಹೆಸರು ಸೇರ್ಪಡೆ ಹೊಂದಿ ಯುವ ಮತದಾರರು, ಮಹಿಳೆಯರು ಭಾಗವಹಿಸಿ ವಿವಿಧ ಕಲಾತ್ಮಕ ಚಿತ್ರಗಳನ್ನು ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.
ತಾಲೂಕು ಪಂಚಾಯತಿಯ ಐಇಸಿ ಸಂಯೋಜಕ ಶಾಂತಪ್ಪ ಇಂಡಿ ಮಾತನಾಡಿ, ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತಚಲಾಯಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳಾದ ಶ್ರೀಮತಿ ಸುನೀತಾ ಪಾಟೀಲ್, ಶ್ರೀಮತಿ ಮಹದೇವಿ ಚಿಕ್ಕಲಕಿ, ಶ್ರೀಮತಿ ಸವಿತಾ ವಸಟ್ಟಿ, ವಿಶಾಲ ಹಳ್ಳದ್, ಶ್ರೀಮತಿ ಭಾಗ್ಯಶ್ರೀ ಪತ್ತಾರ್ ಇತರರು ಉಪಸ್ಥಿತರಿದ್ದರು.
ನಿಡಗುಂದಿ: ತಾಲೂಕಿನ ಯಲಗೂರ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಹಾಗೂ ಯಲಗೂರು ಗ್ರಾಮ ಪಂಚಾಯಿತಿ ವತಿಯಿಂದ ದಿನಾಂಕ: ೨೯.೦೪.೨೦೨೩ರಂದು ಮತದಾನದ ಜಾಗೃತಿ ಅಂಗವಾಗಿ ಮೆಣದಬತ್ತಿ ಜಾಥಾ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಜೀಜ್ ಬಾರೇ ಇಮಾಮ್ ಮಾತನಾಡಿ ಬರುವ ಮೇ-೧೦ ರಂದು ಜರುಗುವ ಮತದಾನದಂದು ಪ್ರತಿಯೊಬ್ಬರೂ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಯಾವದೇ ಆಮಿಷಕ್ಕೆ ಒಳಗಾಗದೇ ಮತವನ್ನು ಚಲಾಯಿಸಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಗ್ರಾಮದ ಮಾರುತಿ ದೇವಸ್ಥಾನ ಪಾದಗಟ್ಟೆಯ ಸರ್ಕಲ್ನಲ್ಲಿ ಮೇಣದ ಬತ್ತಿ ಬೆಳಕಿನಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂಬ ವ್ಯಾಕ್ಯ ರಚಿಸಿ ಮತದಾನ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು. ನಂತರ, ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು. ಪ್ರತಿಜ್ಞೆಯನ್ನು ತಾಲೂಕು ಐಇಸಿ ಸಂಯೋಜಕರಾದ ದಸ್ತಗೀರ್ ಗುಡಿಹಾಳ ಅವರು ಭೋಧಿಸಿದರು.
ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರಾದ ದಸ್ತಗೀರ್ ಗುಡಿಹಾಳ, ಬಿಲ್ ಕಲೆಕ್ಟರ್ ಶಿವಾನಂದ ಆರ್.ನಾಯಕ, ಡಿಇಒ ಮಲ್ಲಯ್ಯ ಹಿರೇಮಠ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ನಿಡಗುಂದಿ: ಇಂದು ಪಟ್ಟಣದ ವಾರದ ಸಂತೆಯಲ್ಲಿ ತಾಲ್ಲೂಕು ಪಂಚಾಯತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕರಪತ್ರ ವಿತರಣೆ ಅಭಿಯಾನ ಆಯೋಜಿಸಲಾಯಿತು.
ಶನಿವಾರ ಸಂತೆಗೆ ಬಂದ ಜನರಿಗೆ ಮತದಾನ ಜಾಗೃತಿಯ ಕರಪತ್ರ ನೀಡಿ ಮತದಾನದ ಅರಿವು ಮೂಡಿಸಲಾಯಿತು. ಮತದಾನ ಜಾಗೃತಿಯ ಕರಪತ್ರಗಳನ್ನು ಹಿಡಿದು ಜಾಗೃತಿ ಗೀತೆಗಳೊಂದಿಗೆ ವಾರದ ಸಂತೆ ಹಾದಿಯಲ್ಲಿ ತಾಲ್ಲೂಕು ಪಂಚಾಯತ ಸಹಾಯಕ ನಿರ್ದೇಶಕರು ( ಪಂ.ರಾ) ಎಸ್.ಜೆ.ಉದಯಕುಮಾರ್ ಹಾಗೂ ಬಿ.ಎಂ.ಅAಕದ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ಸಂತೆಗೆ ಬಂದ ಜನರಿಗೆ ಮೇ.೧೦ ರಂದು ನಡೆಯುವ ಚುನಾವಣೆಯಲ್ಲಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೇ. ತಪ್ಪದೇ ಮತ ಚಲಾಯಿಸಿ, ನಿಮ್ಮ ಮತ ಅಮೂಲ್ಯ. ಓಟ ಮಾಡಿದವನೇ ಹೀರೋ. ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಪಡಿಸಿ ಎಂದು ಸೇರಿದ ಜನರಲ್ಲಿ ಅಧಿಕಾರಿಗಳು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಗಂಗಾಧರ ಕರಡಿ, ಶ್ರೀಮತಿ ಸವಿತಾ ಬಿರಾದಾರ, ತಾಲ್ಲೂಕು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಸಂಯೋಜಕರಾದ ದಸ್ತಗೀರ್ ಗುಡಿಹಾಳ, ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ಜಾಫರ್ ಸಾಲಿಮನಿ, ಸರಸ್ವತಿ ಸಜ್ಜನ, ಸುರೇಶ್ ವಡ್ಡರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS election udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.