ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಓತಿಹಾಳ ಗ್ರಾಮದ ರಸ್ತೆಗಳು ಅನೇಕ ವರ್ಷಗಳಿಂದ ಹದಗೆಟ್ಟಿದ್ದು, ಅದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಕಾರಣ ರಸ್ತೆಗಳನ್ನು ದುರಸ್ಥಿಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಮತ್ತು ಬಂದಾಳ ಓತಿಹಾಳ, ಬೂದಿಹಾಳ ಹಾಗೂ ಹರನಾಳ ಮಾರ್ಗವಾಗಿ ವಿಜಯಪುರಕ್ಕೆ ತೆರಳಲು ಸಾರಿಗೆ ಬಸ್ಸ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕರಿಗೆ ವಿಜಯಪುರ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ದೇವರೆಡ್ಡಿ ಮನವಿ ಮಾಡಿಕೊಂಡರು.

