ಉದಯರಶ್ಮಿ ದಿನಪತ್ರಿಕೆ
ಇಂಡಿ: ಮುಖ್ಯಮಂತ್ರಿ ಸಿದ್ದರಾಮಯ್ಯಾ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಜನಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ವಿಪಕ್ಷದವರ ಹೇಳಿಕೆಗಳಿಗೆ ಸೂಕ್ತ ಉತ್ತರ ನೀಡಿ ಸ್ವಾವಲಂಬಿ ಕರ್ನಾಟಕ ರೂಪಿಸುವತ್ತ ಸರ್ಕಾರ ಮುನ್ನಡೆದಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಸಮೀಪದ ಗೂಗಿಹಾಳ ಗ್ರಾಮದ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿ ಮಾಬೂಬಿ ಅಬ್ಬಾಸಲಿ ಚೌಧರಿ ಇವರು ಗೃಹ ಲಕ್ಷ್ಮೀ ನೀಡಿದ ಹಣ ಉಳಿಸಿ ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಸಮಸ್ಥ ಗ್ರಾಮಸ್ಥರಿಗೆ ಹೊಳಿಗೆ ಊಟ ಮಾಡಿಸಿದ್ದರು.
ತಾಲೂಕ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಗ್ಯಾರಂಟಿ ಯೋಜನೆ ಅಧ್ಯಕ್ಷ ಶ್ರೀಶೈಲ ಕವಲಗಿ, ಜಿಲ್ಲಾ ಕೆಡಿಪಿ ಸದಸ್ಯ ನೂರಹಮ್ಮದ ಅತ್ತಾರ, ಸುನಂದಾ ಯಂಪುರೆ, ಮಹಾನಂದ ಬಮ್ಮಣ್ಣಿ, ಜಯಶ್ರೀ ಹಂದನೂರ, ಗ್ರಾಮ ಪಂಚಾಯತ ಅಧ್ಯಕ್ಷ ರಜಾಕ ಚಿಕ್ಕಗಸಿ, ಪರಸು ಬಿಸನಾಳ, ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಸಿದ್ದು ಹತ್ತಳ್ಳಿ, ಕಾಂತನಗೌಡ ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.

