ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ವಿದ್ಯಾರ್ಥಿನಿ ಲಕ್ಷ್ಮಿ ಪಾಟೀಲ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ಎಂಜಿವಿಸಿ ಕಾಲೇಜಿನಿಂದ ಯಾರಿಗೂ ಹೇಳದೇ ಕೇಳದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ ಅಂತಾ ಲಕ್ಷ್ಮಿ ತಾಯಿ ಗೀತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
