ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲಿನ ಕಿರುಕುಳ 2023ರ ಅಧಿನಿಯಮಕ್ಕೆ ಸಂಬಂಧಿಸಿದಂತೆ ವಿಜಯಪುರ ಮಹಾನಗರಪಾಲಿಕೆ ಕಛೇರಿಯಲ್ಲಿ ಆತಂರಿಕ ದೂರು ಸಮಿತಿ ರಚಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಸಂಸ್ಥೆ ಕಡ್ಡಾಯವಾಗಿ ಮಹಿಳಾ ಪ್ರತಿನಿಧಿಯನ್ನು ನೇಮಿಸಿಕೊಂಡಿರಬೇಕು. ಆ ಮಹಿಳಾ ಪ್ರತಿನಿಧಿಯು ಮಹಿಳೆಯರಿಗೆ ಸಂಬಂಧಿಸಿದ ಸೇವಾ ವಲಯಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರಬೇಕು. ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಜ.15ರ ಒಳಗಾಗಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಮಹಾನಗರಪಾಲಿಕೆ ಆಯುಕ್ತ ಕಛೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
