ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಜ.1ರಿಂದ ಜ.31ರವರೆಗೆ “ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಕ್ರಮದ ಮೂಲಕ ಎಲ್ಲಾ ಘಟಕ ಹಾಗೂ ಬಸ್ ನಿಲ್ದಾಣಗಳಲ್ಲಿ ಅಪಘಾತ, ಅಪಘಾತಗಳಿಂದ ಉಂಟಾಗುವ ಪರಿಣಾಮ ಹಾಗೂ ಅಪಘಾತಗಳನ್ನು ತಡೆಗಟ್ಟಲು ಚಾಲಕರು ಅನುಸರಿಸಬೇಕಾದ ಕ್ರಮಗಳ ಕುರಿತು ಚಾಲಕರಿಗೆ ಮಾಹಿತಿ ನೀಡಲಾಗುವುದು. ಇದೇ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಿಗೆ ವೈದ್ಯಕೀಯ ಹಾಗೂ ನೇತ್ರ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
