ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ಸವದತ್ತಿ ಹಾಗೂ ಬನಶಂಕರಿ ಜಾತ್ರೆ ಪ್ರಯುಕ್ತ ಜನವರಿ 12ರಿಂದ 17ರ ವರೆಗೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲಮ್ಮದೇವಿ ಜಾತ್ರೆ ಹಾಗೂ ಜ.13ರಿಂದ 18ರವರೆಗೆ ಬಾಗಲಕೋಟೆ ಜಿಲ್ಲೆಯ ಬದಾಮಿಯ ಬನಶಂಕರಿ ದೇವಿ ಜಾತ್ರೆ ನಿಮಿತ್ತ ಜಾತ್ರೆಗೆ ತೆರಳುವ ಭಕ್ತಾಧಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಬಸ್ ನಿಲ್ದಾಣ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟ, ಬ.ಬಾಗೇವಾಡಿ ಹಾಗೂ ನಿಡಗುಂದಿ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುತ್ತಿದ್ದು,ಪ್ರಯಾಣಿಕರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ವಿನಂತಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ 1ನೇ ಘಟಕದ ವ್ಯವಸ್ಥಾಪಕರ ಮೊ.ಸಂ 7760992263, 2ನೇ ಘಟಕದ 7760992264, ಇಂಡಿ- 7760992265, ಸಿಂದಗಿ- 7760992266, ಮುದ್ದೇಬಿಹಾಳ- 7760992267, ತಾಳಿಕೋಟ- 7760992268, ಬ.ಬಾಗೇವಾಡಿ- 7760992269, ವಿಜಯಪುರ ಕೇಂದ್ರ ಬಸ್ ನಿಲ್ದಾಣಾಧಿಕಾರಿ ಮೋ ಸಂ -7760992258 ಮತ್ತು ವಿಜಯಪುರದ ಕೇಂದ್ರ ಬಸ್ ನಿಲ್ದಾಣದ ಸ್ಥಿರ ದೂರವಾಣಿ ಸಂಖ್ಯೆ 08352-251344ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
