ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 16 ನೇ ವಾರ್ಷಿಕ ಘಟಿಕೋತ್ಸವವು ಜ. 9 ಗುರುವಾರ ಮಧ್ಯಾಹ್ನ 12.30ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಜ್ಞಾನಶಕ್ತಿ ಕ್ಯಾಂಪಸ್ನಲ್ಲಿ ನಡೆಯಲಿದೆ.
ಘಟಿಕೋತ್ಸವದ ಘನ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ರಾಜ್ಯಪಾಲರು ಹಾಗೂ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಸನ್ಮಾನ್ಯ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿಗಳಾದ ಪ್ರೊ.ಶಶಿಕಲಾ ವಂಜಾರಿ ಭಾಗವಹಿಸಲಿದ್ದಾರೆ. ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ,ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಶಿ. ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಹೆಚ್.ಎಂ. ಚಂದ್ರಶೇಖರ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟನೆಯು ತಿಳಿಸಿದೆ.
