ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾರವಾಡ ಗ್ರಾಮ ಪಂಚಾಯತ, ಗ್ರಾಮೀಣ ಕುಡಿರುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ ಮಿಷನ್ ಯೋಜನೆಯಡಿ ಸಾರವಾಡ ಗ್ರಾಮದ 24 X 7 ನೀರು ಸರಬರಾಜು ಗ್ರಾಮ ಘೋಷಣೆ ಸಮಾರಂಭ ಕಾರ್ಯಕ್ರಮವನ್ನು ಜ.9 ಗುರುವಾರ ಬೆಳಿಗ್ಗೆ 11ಗಂಟೆಗೆ ಸಾರವಾಡ ಗ್ರಾಮದ ಈಶ್ವರ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮೂಲ ಸೌಕರ್ಯ ಜಿಲ್ಲಾ ಉಸ್ತವಾರಿ ಸಚಿವರಾದ ಎಂ.ಬಿ.ಪಾಟೀಲ ಹಾಗೂ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಪ್ರೀಯಾಂಕ ಖರ್ಗೆ ಕಾರ್ಯಕ್ರಮ ಉದ್ಘಾಟನೆ ಹಾಗೂ ಘೋಷಣೆ ಮಾಡಲಿದ್ದಾರೆ.
ಸಾರವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲಕನ ಗೌಡ ಶಂಕರಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭಾ ಸದಸ್ಯರಾದ ರಮೇಶ್ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯರುಗಳಾದ ಸುನೀಲಗೌಡ ಪಾಟೀಲ್, ಪಿ.ಎಚ್.ಪೂಜಾರಿ ಎಚ್.ಆರ್.ನಿರಾಣಿ, ಪ್ರಕಾಶ ಉಕ್ಕೇರಿ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾ.ಕು.ನೀ & ನೈ, ಕಾರ್ಯನಿರ್ವಾಹಕ ಇಂಜನಿಯರಾದ ಬಸವರಾಜ ಎಸ್ ಕುಂಬಾರ, ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಯೋಜನಾ ನಿರ್ದೇಶಕರಾದ ಬಿ.ಎಸ್.ರಾಠೋಡ, ಬಬಲೇಶ್ವರ್ ತಾಲ್ಲೂಕ್ ಪಂಚಾಯಕ ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಸ್.ಪಠಾಣ, ತಹಶೀಲ್ದಾರ್ ಸಂತೋಷ ಮ್ಯಾಗೇರಿ, ಸಹಾಯಕ ಇಂಜನಿಯರ ಗ್ರಾ.ಕು.ನೀ & ನೈ, ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ ಎಸ್.ಬಿ.ಪಾಟೀಲ ಸಾರವಾಡ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಸಂತೋಷ ಮ ಸೋಮಕ್ಕನವರ ಅಥಿತಿಗಳಾಗಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
