ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜನವರಿ 9ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ, ಮಕ್ಕಳೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.10 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಆರ್.ಟಿ.ಇ ಕುರಿತು ಸಭೆಯನ್ನು ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಳಿಸಿದೆ.
