ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ 2024ನೇ ಸಾಲಿನ (01-01-2024 ರಿಂದ 31-12-2024ರ ವರೆಗೆ) ರಾಜ್ಯ/ರಾಷ್ಟ್ರ/ ಅಂತರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜನವರಿ 23 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ದೂ ಸಂಖ್ಯೆ 08325-251085/8792185141 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
