ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯಕ್ಕೆ ಜನೇವರಿ 9 ಮತ್ತು 10 ರಂದು ನ್ಯಾಕ್ ತಂಡದ ಭೇಟಿ ನೀಡಲಿದೆ.
ಇದೇ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆಯನ್ನು ಕೂಡ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ಪಾಲಕರು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಪ್ರಾಚಾರ್ಯರು, ಸಿಬ್ಬಂದಿ, ಪ್ರಶಿಶಿಕ್ಷಣಾರ್ಥಿಗಳು ಉಪಸ್ಥಿತರಿರಲಿದ್ದಾರೆ.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲಿ ಉಪಸ್ಥಿತರಿರಬೇಕು ಎಂದು ಕಾಲೇಜಿನ ಪ್ರಾಚಾರ್ಯೆ ಬಿ. ವೈ. ಖಾಸನೀಸ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
