ಮುದ್ದೇಬಿಹಾಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು 18ವರ್ಷ ದಾಟಿದ ಎಲ್ಲರೂ ತಪ್ಪದೆ ಮತದಾನ ಮಾಡುವ ಮೂಲಕ ಸಂವಿದಾನವನ್ನು ಗೌರವಿಸಿ ಎಂದು ನಾಗಬೇನಾಳ ಗ್ರಾಮ ಪಂಚಾಯಿತಿ ಪಿಡಿಓ ಪ್ರಭುದೇವ ಜೇವೂರ ಹೇಳಿದರು.
ತಾಲ್ಲೂಕಿನ ತಾಲೂಕಿನ ನಾಗಬೇನಾಳ ಗ್ರಾಮ ಪಂಚಾಯಿತಿ ವ್ಯಪ್ತಿಗಳ ವಿವಿಧ ಗ್ರಾಮದಲ್ಲಿ ನಡೆದ ವಿದಾನ ಸಭಾ ಸಾರ್ವತ್ರಿಕ ಚುನಾವಣೆ ೨೦೨೩ಕ್ಕೆ ಸಂಬ0ಧಿಸಿದ0ತೆ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ. ಮೇ೧೦ ರಂದು ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಈ ವೇಳೆ ಕಾರ್ಯದರ್ಶಿ ಸಂಗಮೇಶ ಕೂಡಗಿ, ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment