Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾಪುರುಷರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಮಹಾಪುರುಷರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಇದೇ ಜನವರಿ ೧೪ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಜ.೧೯ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜ.೨೧ರಂದು ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಜನವರಿ ೧೪ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಹಾಗೂ ಜ.೧೯ರಂದು ಜಯಂತಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮಗಳನ್ನು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮವನ್ನು ನಗರದ ರಂಗಮಂದಿರ ದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ ೧೦ ಘಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ಆಯೋಜನೆ ಮಾಡಲಾಗಿದೆ. ನಂತರ ವೇದಿಕೆ ಕಾರ್ಯಕ್ರಮ ಮಾಡುವ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಜಿಲ್ಲಾಡಳಿತದಿಂದ ಆಚರಿಸಲಾಗುವ ಈ ಎಲ್ಲ ಮಹನಿಯರ ಜಯಂತಿ ದಿನಗಳಂದು, ಜಯಂತಿ ಕಾರ್ಯಕ್ರಮ ಹಾಗೂ ಮೆರವಣಿಗೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ವೇದಿಕೆ ಕಾರ್ಯಕ್ರಮದಲ್ಲಿ ಆಸನಗಳ ವ್ಯವಸ್ಥೆ, ಆಹ್ವಾನ ಪತ್ರಿಕೆ ಮುದ್ರಣ, ಶಿಷ್ಠಾಚಾರದಂತೆ ಜಯಂತಿಗಳಿಗೆ ಆಹ್ವಾನ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜ.೨೧ರಂದು ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ಬೆಳಿಗ್ಗೆ ೧೦.೦೦ಕ್ಕೆ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಅತ್ಯಂತ ಸರಳ ಹಾಗೂ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಜಿ.ಪಂ ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಡಿ.ವೈ.ಎಸ್.ಪಿ ಬಸವರಾಜ ಎಲಿಗಾಗರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸಮಾಜದ ಮುಖಂಡರಾದ ವಿ.ಸಿ.ನಾಗಠಾಣ, ರಾಮು ಹೊಸಪೇಟೆ, ಕೆ.ವಾಯ್. ಆಲಕುಂಟೆ, ಅಡಿವೆಪ್ಪ ಸಾಲಗಲ್ಲ, ಮಾರುತಿ ಚವ್ಹಾಣ, ಬಸವರಾಜ ನೇಗಿನಾಳ, ಸುರೇಶ ಶಿಂಗೆ, ಎಚ್.ಆರ್. ಮಾಚಪ್ಪನವರ, ಕೆ.ಬಿ. ಪಾಟೀಲ್ ಸೋಮನಗೌಡ ಕಲ್ಲೂರ, ವಿದ್ಯಾವತಿ ಅಂಕಲಗಿ, ರಾಮು ಹೊಸಪೇಟೆ, ಎಚ್. ಆರ್. ಮಚಪ್ಪನವರ, ಕೆ.ಬಿ. ಪಾಟೀಲ, ಎಸ್.ಎಲ್.ಜೀರಗಾಳ, ಎ.ಎಚ್ ಮಲಘಾಣ,ಎಸ್.ಬಿ. ಹರನಾಳ, ಬಾಬುಗೌಡ ಬಿರಾದಾರ, ಭರತ ಕೋಳಿ, ದೇವೇಂದ್ರ ಮೇರೇಕರ್, ಭೀಮರಾಯ ಜಿಗಜಿಣಗಿ, ಗಿರೀಶ್ ಕುಲಕರ್ಣಿ, ಸಾಹೇಬಗೌಡ ಬಿರಾದಾರ, ಶಿವಾನಂದ ಅಂಬಿಗೇರ,ಪರಶುರಾಮ ಅಳಗುಂಡಗಿ, ಅಶೋಕ ಅಂಬಿಗೇರ, ಹನಮಂತ ನಾಯ್ಕೋಡಿ, ಗುರುನಾಥ ವಾಲಿಕಾರ, ಪ್ರವೀಣ ಗಣಿ, ಸಂತೋಷ ತಟಗಾರ, ಮಹಾದೇವ ಗದ್ಯಾಳ, ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಗುಟ್ಕಾ ಸೇವನೆ ಚಟ ಹತ್ತಿಸುವುದು ಚಟ್ಟ!
    In ಆರೋಗ್ಯ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026
    In ದಿನಪತ್ರಿಕೆ
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.