Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಕಷ್ಟದಲ್ಲಿರುವ ಮಕ್ಕಳಿಗೆ ಸಂರಕ್ಷಣೆ ಮಾಡಿ :ಕೋಸಂಬೆ
(ರಾಜ್ಯ ) ಜಿಲ್ಲೆ

ಸಂಕಷ್ಟದಲ್ಲಿರುವ ಮಕ್ಕಳಿಗೆ ಸಂರಕ್ಷಣೆ ಮಾಡಿ :ಕೋಸಂಬೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಡತನ ಸೇರಿದಂತೆ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ತಿಳಿಸಿದರು.
ನಗರದ ಗಾಂಧಿ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲೆಯಲ್ಲಿದೆ ಶಿಕ್ಷಣ ಜೊತೆಗೆ ರಕ್ಷಣೆ ಎಂಬ ಶಿರ್ಷಿಕೆ ಅಡಿಯಲ್ಲಿ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಸಂರಕ್ಷಣೆಗಾಗಿ ಇರುವ ೧೨ ಕಾಯ್ದೆಗಳು ಹಾಗೂ ೨ ನೀತಿಗಳು ಸಂಬAಧಪಟ್ಟ ಅಧಿಕಾರಿಗಳು ಕಾರ್ಯರೂಪಕ್ಕೆ ತರುವ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.
ಮಕ್ಕಳ ಮೇಲಾಗುತ್ತಿರುವ ಬಹಳಷ್ಟು ಬೆಳಕಿಗೆ ಬರುತ್ತಿಲ್ಲ. ಹೀಗಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೀದರ್ ದಿಂದ ಚಾಮರಾಜನಗರದ ವರೆಗೆ ಶಾಲೆಯಲ್ಲಿದೆ ಶಿಕ್ಷಣ ಜೊತೆಗೆ ರಕ್ಷಣೆ ಎಂಬ ಶಿರ್ಷಿಕೆ ಅಡಿಯಲ್ಲಿ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾಹಿತಿ ಕಲೆಹಾಕಲಾಗುತ್ತಿದೆ ಇದರಿಂದ ಮಕ್ಕಳು ನಿಜವಾಗಿಯೂ ಅನುಭವಿಸುತ್ತಿರುವ ಸಮಸ್ಯೆಗಳಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿ ಹಲವಾರು ಸಮಸ್ಯೆಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವ ಆಯೋಗವು ಜಟಿಲವಾದ ಸಮಸ್ಯೆಗಳಿಗೆ ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ ನಿಯಮಿತ ಕಾಲದಲ್ಲಿ ಬಗೆಹರಿಸಲು ಅಧಿಕಾರಿಗಳ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಮಕ್ಕಳೊಂದಿಗೆ ಮುಕ್ತ ಸಂವಾದ ಮತ್ತು ಅಹವಾಲು ಕಾರ್ಯಕ್ರಮಕ್ಕೆ ಜಿಲ್ಲೆಯ ಭಾಗದ ಮಕ್ಕಳಿಗೆ ಕರೆತರುವಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕರು ವಿಫಲರಾಗಿದ್ದಾರೆ. ಹೀಗಾಗಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ತಿಳಿಸಲು ವೇದಿಕೆ ಮೇಲಿದ್ದ ಸಹಾಯಕ ಆಯುಕ್ತರಾದ ಗುರುನಾಥ್ ದಡ್ಡಿ ತಿಳಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ ಮಾತನಾಡಿ, ಬಾಲ್ಯ ವಿವಾಹ ತಡೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಸದ್ಯ ಜಾರಿಯಲ್ಲಿರುವ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳಿಗೆ ಸಮಸ್ಯೆಯಾಗುತ್ತಿದ್ದು, ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯಾಕ್ಕೆ ಪ್ರತ್ಯೇಕವಾದ ಪೊಲೀಸ್ ಸೆಲ್ ರಚನೆಗಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಫಾರಸ್ಸು ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಡಳಿತದ ಪರವಾಗಿ ಆಗಮಿಸಿದ ಸಹಾಯಕ ಆಯುಕ್ತ ಗುರುನಾಥ್ ದಡ್ಡಿ ಮಾತನಾಡಿ, ಮಕ್ಕಳು ತಮಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆಸಿದ ಸಂವಾದದ ಪ್ರತಿಯೊಂದು ವಿಷಯದ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಪಂ ಸಿಇಒ ಅವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.
ವಿಜಯಪುರ ನಗರ ಪ್ರದೇಶದ ಕೆಬಿಎಸ್ ಶಾಲೆಯ ನಂ. ೩೬,೨೬,೧೦ ಗಳ ತರಗತಿಯ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಶೌಚಾಲಯ ವ್ಯವಸ್ಥೆ ಇಲ್ಲ, ಆಟದ ಮೈದಾನ ಇಲ್ಲ ಜೊತೆಗೆ ಊಟ ಮಾಡಲು ತಟ್ಟೆಯಲ್ಲಿದ ಕಾರಣ ಒಂದು ತಟ್ಟೆಯಲ್ಲಿ ನಾಲ್ಕು ಮಕ್ಕಳು ಊಟ ಮಾಡುತ್ತಿರುವುದು ಬೇಸರದ ಸಂಗತಿ – ಶಶಿಧರ ಕೋಸಂಬೆ, ಸದಸ್ಯರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೌಹಾನ್, ವಿಭಾಗೀಯ ನಿಯಂತ್ರಣ ಅಧಿಕಾರಿ ಕರಬರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸಮ್ಮ ಹತ್ತರಕಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಮೌನೇಶ್ ಪತ್ತಾರ ನಿರೂಪಿಸಿದರು, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಶಾಲೆಗಳಿಂದ ಮಕ್ಕಳು ಆಗಮಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.