ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡೆಹಾರಾಡುನ್‌ನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ನಲ್ಲಿ ೮ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಬಾಲಕ ಹಾಗೂ ಬಾಲಕಿಯರಿಂದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಿತಿತಿ.ಡಿimಛಿ.gov.iಟಿ ನಲ್ಲಿ ಅರ್ಜಿ ನಮೂನೆಯನ್ನು ಪಡೆದು ಆನ್ ಲೈನ್‌ನಲ್ಲೇ ಶುಲ್ಕ ಪಾವತಿ ಮಾಡಬೇಕು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನ್ಮ ಪ್ರಮಾಣ ಪತ್ರ, ೫ ಪಾಸ್‌ಪೋರ್ಟ್ ಸೈಜ್ ಪೋಟೋ, ಪರೀಕ್ಷಾ ಪ್ರವೇಶ ಪತ್ರ ನಮೂನೆ, ಶಾಲಾ ಧೃಡೀಕರಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಮೂಲಸ್ಥಾನ ಧೃಡೀಕರಣ ಪತ್ರಗಳೊಂದಿಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಮುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್. ಕರ್ಯಪ್ಪ ಭವನ ನಂ.೫೮ ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-೨೫ ಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ ೩೧ ೨೦೨೫ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯಕ್ಕೆ ಹಾಗೂ ದೂರವಾಣಿ ಸಂಖ್ಯೆ ೦೮೦-೨೫೫೮೯೪೫೯ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
