ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಹೊರವಲಯ ಹಿಟ್ನಲ್ಲಿ ಪಾರ್ಮನಲ್ಲಿರುವ ಕೃಷಿ ಮಹಾವಿಶ್ವವಿದ್ಯಾಲಯದಲ್ಲಿ ಜ.೧೧ ರಿಂದ ೧೩ರ ವರೆಗೆ ಕೃಷಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ೨೦೨೪-೨೫ನೇ ಈ ಕೃಷಿ ಮೇಳದ ಘೋಷವಾಕ್ಯ “ಆಹಾರ ಮತ್ತು ಪೌಷ್ಠಿಕ ಭದ್ರತೆಗಾಗಿ ಸುಸ್ಥಿರ ಕೃಷಿ” ಎಂಬುದಾಗಿದೆ.
ರಾಜ್ಯ ಸರ್ಕಾರದ ಕೃಷಿ ಸಚಿವ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕೃಷಿ ವಸ್ತು ಪ್ರದರ್ಶನದ ಉದ್ಘಾಟನೆ ಮಾಡಲಿದ್ದಾರೆ.
ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಧೋಂಡಿಬಾ ಕಟಕಧೋಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ವಿಧಾನಸಭೆ ಶಾಸಕ ಅಪ್ಪಾಜಿ ಸಿ ಎಸ್.ನಾಡಗೌಡ, ಲೋಕಸಭಾ ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸಂಸದೆ ಸುಧಾ ಮೂರ್ತಿ, ವಿಧಾನಸಭೆ ಶಾಸಕ ಯಶವಂತರಾಯಗೌಡ ಪಾಟೀಲ, ವಿಧಾನಸಭೆ ಶಾಸಕ ಬಸವಗೌಡ ಯತ್ನಾಳ, ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಜಿ.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರಿ, ಕೇಶವ ಪ್ರಸಾದ ಎಸ್, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
