ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಹಲವು ಅನೇಕ ಸ್ಥಳಗಳಲ್ಲಿ ಕಳ್ಳತನ ಕೃತ್ಯವೆಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೊಳೂರು ಗ್ರಾಮದ ನಿಂಗಪ್ಪ ರಾಜಪ್ಪ ಬಡಿಗೇರ ಎಂಬುದು ತಿಳಿದುಬಂದಿದೆ. ಸಿಂದಗಿಗೆ ಬಂದು ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ.
ಸಿಂದಗಿ ಪಟ್ಟಣದಲ್ಲಿ ಸಂಶಯಾಸ್ಪದವಾಗಿ ಮೋಟರ್ ಸೈಕಲ್ ಮೇಲೆ ತಿರುಗಾಡುತ್ತಿದ್ದನು. ಈತನನ್ನು ಠಾಣೆಗೆ ಕರೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಕಲ್ಯಾಣ ನಗರ, ಮಲ್ಲಿಕಾರ್ಜುನ ನಗರ, ಕೊಕಟನೂರ ಹಾಗೂ ಸುಂಗಠಾಣ ಗ್ರಾಮದಲ್ಲಿಯೂ ಸಹ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಒಂದು ಬೈಕ್, ೧೦೫ಗ್ರಾಂ ಚಿನ್ನಾಭರಣ ವಶಪಡಿಕೊಂಡಿದ್ದಾರೆ.
ಈ ಪ್ರಕರಣ ಸಿಂದಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಈ ವೇಳೆ ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್‌ಐ ಆರೀಫ್ ಮುಷಾಪುರಿ ಸೇರಿದಂತೆ ಸಿಬ್ಬಂದಿಗಳ ಇದ್ದರು.

