Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಶ್ರಯ ಯೋಜನೆ ಜಾರಿಗೆ ಅಧ್ಯಕ್ಷರು ಮುಂದಾಗಲಿ
(ರಾಜ್ಯ ) ಜಿಲ್ಲೆ

ಆಶ್ರಯ ಯೋಜನೆ ಜಾರಿಗೆ ಅಧ್ಯಕ್ಷರು ಮುಂದಾಗಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವರದಿ: ಡಾ.ಯಂಕನಗೌಡ ಎಸ್ ಪಾಟೀಲ
ಕೆಂಭಾವಿ: ಆಡಳಿತದಲ್ಲಿರುವ ಸರ್ಕಾರಗಳು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ನಿರಂತರವಾಗಿದ್ದರು, ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹಾಗೂ ನಿಜವಾದ ಫಲಾನುಭವಿಗಳನ್ನು ಗುರುತಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯದೇ ಅದೆಷ್ಟೋ ಕುಟುಂಬಗಳು ಇಂದಿಗೂ ರೋಟಿ, ಧೋತಿ, ಮಕಾನ್ ಇಲ್ಲದೆ ಬದುಕುತ್ತಿದ್ದಾರೆ. ಅಂತಹವರನ್ನು ಗುರುತಿಸುವ ಗುರುತರ ಜವಾಬ್ದಾರಿವುಳ್ಳ ಸರ್ಕಾರದ ಹತ್ತು ಹಲವು ಸಮಿತಿಗಳಲ್ಲಿ ಆಶ್ರಯ ಸಮಿತಿಯು ಕೂಡ ಒಂದಾಗಿದೆ. ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನೂತನವಾಗಿ ಪದಗ್ರಹಣ ಮಾಡಿದ ಆಶ್ರಯ ಕಮಿಟಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೂ ಪಕ್ಷಾತೀತವಾಗಿ, ಸಾಲು ಸಾಲು ಸನ್ಮಾನ, ಅಭಿನಂದನೆಗಳು, ಮಹಾಪೂರವೇ ಹರಿದುಬರುತ್ತಿರುವುದು ಆಶಾದಾಯಕ ಬೆಳವಣಿಗೆ.
ಇತ್ತೀಚೆಗೆ ರಾಜ್ಯ ಸರ್ಕಾರದಿಂದ ನಾಮನಿರ್ದೇಶನಗೊಂಡ ಆಶ್ರಯ ಕಮಿಟಿಯ ನೂತನ ಅಧ್ಯಕ್ಷ ಶರಣಬಸವ ಕಾಕಾ ಡಿಗ್ಗಾವಿಯವರು ಅಧಿಕಾರಕ್ಕೆ ಆಸೆ ಪಟ್ಟವರಲ್ಲ, ಕಾಡಿಬೇಡಿ ಅಧಿಕಾರ ಪಡೆದವರಲ್ಲ, ಅದಕ್ಕಾಗಿ ಅವರನ್ನು ಯಾರೂ ಹೆಸರಿಟ್ಟು ಕರೆಯುವುದಿಲ್ಲ ಎಲ್ಲರೂ ಪ್ರೀತಿಯಿಂದ ‘ಕಾಕಾ’ ಎಂದು ಕರೆಯುತ್ತಾರೆ. ಹಾಗಾಗಿಯೇ ಡಿಗ್ಗಾವಿಯವರಿಗೆ ಅಧಿಕಾರ ಹುಡುಕಿಕೊಂಡು ಬರುತ್ತದೆ ಎನ್ನುತ್ತಾರೆ ಕೆಲವರು. ಈ ಹಿಂದೆ ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವಾ ಮನೋಭಾವ, ಸಾಮಾಜಿಕ ಕಳಕಳಿ, ಕಂಡು ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಶರಣಬಸಪ್ಪಗೌಡ ದರ್ಶನಪುರವರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಆಶ್ರಯ ಕಮಿಟಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕಾರ್ಯಕರ್ತರಲ್ಲಿ ಹಾಗೂ ಅವರ ಅಭಿಮಾನಿಗಳಲ್ಲಿ ಹುರುಪು, ಉತ್ಸಾಹ, ಹುಮ್ಮಸ್ಸು, ನೂರ್ಮಡಿಯಾಗಿದ್ದು ನಿಜ. ಆಶ್ರಯ ಕಮಿಟಿ ಅಧ್ಯಕ್ಷರು ಮತ್ತು ಸದಸ್ಯರಗಳ ನೇಮಕಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂಬರುವ ದಿನಗಳಲ್ಲಿ ಆಶ್ರಯ ಕಮಿಟಿ ಅಧ್ಯಕ್ಷರು ಮತ್ತು ಸದಸ್ಯರು ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ, ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಲಿ, ನಿರ್ಗತಿಕರಿಗೆ, ಅಂಗವಿಕಲರಿಗೆ, ವಿಧವೆಯರಿಗೆ, ಆರ್ಥಿಕ ದುರ್ಬಲರಿಗೆ, ಮನೆಯಿಲ್ಲದವರನ್ನು ಗುರುತಿಸಿ ಗುಡಿಸಲು ಮುಕ್ತ ಪುರಸಭೆಗೆ ಮುನ್ನುಡಿ ಬರೆಯಲಿ, ವಿವಿಧ ವಸತಿ ಯೋಜನೆಗಳಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಡಾ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ ಹೆಚ್ಚುವರಿ ದೇವರಾಜ್ ಅರಸು ವಸತಿ ಯೋಜನೆ, ಬಸವ ವಸತಿ ಯೋಜನೆಯಡಿ ಸೂರಿಲ್ಲದವರಿಗೆ ಸೂರು ಕಲ್ಪಿಸುವ ಕಾರ್ಯ ‘ಡಿಗ್ಗಾವಿ’ ಯವರಿಂದ ಕಾರ್ಯರೂಪಕ್ಕೆ ಬರಲಿ, ಮತಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಸಚಿವ ಶರಣಬಸಪ್ಪಗೌಡ ದರ್ಶನಪುರವರ ಮನವೊಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳನ್ನು ಮಂಜೂರು ಮಾಡಿಸುವಲ್ಲಿ ಆಶ್ರಯ ಕಮಿಟಿ ಕಾರ್ಯಪ್ರವೃತ್ತವಾಗಲಿ ಎಂಬುದೇ ಜನಾಭಿಪ್ರಾಯ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.