Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೇದರಾಣಿ ದಾಸನೂರು, ಡಾ.ಮೀನಾಕ್ಷಿ ಬಾಳಿ ಮತ್ತು ತಾರಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
(ರಾಜ್ಯ ) ಜಿಲ್ಲೆ

ವೇದರಾಣಿ ದಾಸನೂರು, ಡಾ.ಮೀನಾಕ್ಷಿ ಬಾಳಿ ಮತ್ತು ತಾರಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಜರುಗಿದ ೧೬ನೆಯ ಘಟಿಕೋತ್ಸವದಲ್ಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾವಿಯ ಗೋಟಗೋಡಿ ರಾಕ್‌ಗಾರ್ಡ್ನ್‌ನ ಶ್ರೀಮತಿ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಸಿನಿಮಾ ಕ್ಷೇತ್ರದ ಸಾಧನೆಗಾಗಿ ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿ ತಾರಾ ಅವರಿಗೆ ಕುಲಪತಿಗಳು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಶ್ರೀಮತಿ ವೇದರಾಣಿ ದಾಸನೂರು ಅವರ ಪರಿಚಯವನ್ನು ಡಾ.ರೋಹಿಣಿ ಭೂಸನೂರಮಠ, ಡಾ.ಮೀನಾಕ್ಷಿ ಬಾಳಿ ಅವರ ಪರಿಚಯವನ್ನು ಡಾ.ರೇಣುಕಾ ಮೇಟಿ ಮತ್ತು ತಾರಾ ಅವರ ಪರಿಚಯವನ್ನು ಡಾ.ರಾಜು ಬಾಗಲಕೋಟ ಮಾಡಿಕೊಟ್ಟರು.
ಘಟಿಕೋತ್ಸವದ ಆರಂಭದಲ್ಲಿ ನಡೆದ ಮೆರವಣಿಗೆಯ ನೇತೃತ್ವವನ್ನು ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ವಹಿಸಿದ್ದರು. ಪ್ರಾಧ್ಯಾಪಕ ಪ್ರೊ.ವಿಷ್ಣು ಶಿಂದೆ ಮತ್ತು ಡಾ.ಅಶ್ವಿನಿ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.

೬೩ ವಿದ್ಯಾರ್ಥಿನಿಯರಿಗೆ ೮೦ ಚಿನ್ನದ ಪದಕ & ೩೪ ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ

ಈ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು ೬೩ ವಿದ್ಯಾರ್ಥಿನಿಯರಿಗೆ ೮೦ ಚಿನ್ನದ ಪದಕಗಳನ್ನು ಮತ್ತು ೩೪ ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಈ ಘಟಿಕೋತ್ಸವದಲ್ಲಿ ಒಟ್ಟು ೧೩,೪೬೧ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ ಒಟ್ಟು ೧,೧೦೬ ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ನೀಡಲಾಯಿತು. ಈ ಪೈಕಿ ಎಂ.ಎ.- ೩೬೫, ಎಂ.ಕಾಂ.- ೨೯೬, ಎಂ.ಬಿ.ಎ.- ೪೯, ಎಂ.ಎಸ್.ಸಿ.- ೩೦೪, ಎಂ.ಈಡಿ- ೯, ಎಂ.ಪಿ.ಈಡಿ- ೯, ಎಂ.ಎಸ್.ಡಬ್ಲೂö್ಯ- ೨೦, ಎಂ.ಸಿ.ಎ.- ೪೦ ಮತ್ತು ಎಂ.ಎಫ್.ಎಂ.- ೧೪ ವಿದ್ಯಾರ್ಥಿನಿಯರು ಪದವಿಗೆ ಅರ್ಹರಾಗಿದ್ದಾರೆ.

೧೨,೩೫೦ ವಿದ್ಯಾರ್ಥಿನಿಯರಿಗೆ ಸ್ನಾತಕ ಪದವಿ ಪ್ರದಾನ

ಈ ಘಟಿಕೋತ್ಸವದಲ್ಲಿ ಒಟ್ಟು ೧೨,೩೫೦ ವಿದ್ಯಾರ್ಥಿನಿಯರಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಯಿತು.
ಇದರಲ್ಲಿ ಬಿ.ಎ.– ೫೩೮೭, ಬಿ.ಎಸ್.ಡಬ್ಲೂö್ಯ – ೩೬, ಬಿ.ಈಡಿ -೧೬೬೩, ಬಿ.ಪಿ.ಈಡಿ – ೧೫, ಬಿ.ಕಾಂ – ೩೫೩೬, ಬಿಬಿಎ – ೧೨೨, ಬಿ.ಎಸ್.ಸಿ- ೧೪೧೩, ಬಿ.ಸಿ.ಎ-೧೧೫, ಬಿ.ಎಫ್.ಟಿ- ೬೩ ಮತ್ತು ಬಿ.ಎಫ್‌ಎಡಿ- ೦೫ ವಿದ್ಯಾರ್ಥಿನಿಯರು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ.

ನೇರ ಪ್ರಸಾರ

ಈ ಘಟಿಕೋತ್ಸವವನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಕ್ಕ ಟಿವಿ ಯುಟ್ಯೂಬ್ ನ್ಯೂಸ್ ಚಾನೆಲ್ ನೇರ ಪ್ರಸಾರ ಮಾಡಿದ್ದು ವಿಶೇಷವಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.