ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೨ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ನಡೆಯುವ ಚುನಾವಣೆಯನ್ನು ಜ.೨೭ರಂದು ನಿಗದಿಪಡಿಸಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಯಿಂದ ೧೧ಗಂಟೆ ವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ಮಧ್ಯಾಹ್ನ ೧ಗಂಟೆ ಯಿಂದ ಚುನಾವಣೆ ನಡೆದು ಅಂದೇ ಪಲಿತಾಂಶ ಘೋಷಣೆ ಮಾಡಲಾಗುವುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
