Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಜಾರಿಗೊಳಿಸಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಜಾರಿಗೊಳಿಸಿ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಗರ್ಭಧಾರಣಾ ಪೂರ್ವ ಮತ್ತು ಪ್ರಸವಪೂರ್ವ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ ೧೯೯೪ ನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು ಮತ್ತು ಸದರಿ ಕಾಯ್ದೆ ಉಲ್ಲಂಘಿಸಿರುವ ಸ್ಕಾö್ಯನಿಂಗ್ ಕೇಂದ್ರಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲು ಮತ್ತು ಸದರಿ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜ.೮ರಂದು ಬುಧವಾರ ಪಿಸಿ&ಪಿಎನ್‌ಡಿಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಅವರು, ರಾಜ್ಯ ಸಕ್ಷಮ ಪ್ರಾಧಿಕಾರದ ಅಧಿಕಾರಿ ಮತ್ತು ತಂಡದವರು ಡಿ.೨೬, ೨೦೨೪ & ಡಿ. ೨೭, ೨೦೨೪ ರಂದು ಜಿಲ್ಲೆಯಲ್ಲಿನ ಆಸ್ಪತ್ರೆ/ಸ್ಕ್ಯಾನಿಂಗ್ ಕೇಂದ್ರಗಳಿಗೆ ಅನೀರಿಕ್ಷಿತವಾಗಿ ಭೇಟಿ ನೀಡಿದಾಗ ಪಿಸಿ&ಪಿಎನ್‌ಡಿಟಿ ಕಾಯ್ದೆಯ ಉಲ್ಲಂಘನೆ ಮಾಡಿರುವ ೧) ದೇಸಾಯಿ ಆಸ್ಪತ್ರೆ, ಇಂಡಿ ೨) ಗಜಾಕೋಶ ಆಸ್ಪತ್ರೆ, ಇಂಡಿ ಹಾಗೂ ೩) ಆದಿತ್ಯ ಮೆಟರನಿಟಿ & ಜನರಲ್ ಆಸ್ಪತ್ರೆ, ವಿಜಯಪುರ ಇಲ್ಲಿನ ಸ್ಕಾö್ಯನಿಗ್ ಯಂತ್ರಗಳನ್ನು ಸೀಜ್ ಮಾಡಿ ಆಸ್ಪತ್ರೆ/ಸ್ಕಾö್ಯನಿಂಗ್ ಕೇಂದ್ರದ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಸದರಿ ಆಸ್ಪತ್ರೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲು ಅವರು ಸೂಚಿಸಿದರು.
ಜಿಲ್ಲೆಯ ೦೪ ಸ್ಕ್ಯಾನಿಂಗ್ ಕೇಂದ್ರ/ಆಸ್ಪತ್ರೆಗಳಾದ ೧) ಶಿವಾ ಕ್ಲಿನಿಕ್, ಚಡಚಣ ೨) ಮಿರಜಕರ ಆಸ್ಪತ್ರೆ, ಚಡಚಣ ೩) ಶ್ರೀ ಸಾಯಿ ಆಸ್ಪತ್ರೆ, ತಾಳೀಕೋಟಿ ಮತ್ತು ೪) ಪ್ರೇಮಾ ಸ್ಕಾö್ಯನ್ ಸೆಂಟರ್, ವಿಜಯಪುರ ಕೇಂದ್ರಗಳಿಗೆ ನೋಟಿಸ್ ನೀಡಲಾಗಿದ್ದು, ಸದರಿ ನೋಟೀಸ್‌ಗೆ ಅವರಿಂದ ಸಲ್ಲಿಕೆಯಾಗಿರುವ ವಿವರಣೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಕಾಯ್ದೆ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಪಿಸಿ&ಪಿಎನ್‌ಡಿಟಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಕ್ರಮವನ್ನು ಜರುಗಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಚಡಚಣದಲ್ಲಿರುವ ಸ್ಕ್ಯಾನಿಂಗ್ ಕೇಂದ್ರ/ಆಸ್ಪತ್ರೆಯಲ್ಲಿ ಫರ‍್ಮ-ಎಫ್ ನಲ್ಲಿ ರೋಗಿಗಳು ಮಾಡಿರುವ ಸಹಿಗಳ ನೈಜತೆಯ ಬಗ್ಗೆ ಫಾರೆನ್ಸಿಕ್ ತಜ್ಞರಿಂದ ಪರೀಲಿಸಿಕೊಂಡು ವರದಿ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಹೊಸದಾಗಿ ಸ್ಕ್ಯಾನಿಂಗ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಸಲ್ಲಿಸಿರುವ ಆಸ್ಪತ್ರೆ/ಸ್ಕ್ಯಾನಿಂಗ್ ಕೇಂದ್ರಗಳ ಮಾಲೀಕರು, ಸದರಿ ಕಾಯ್ದೆ ಅಡಿಯಲ್ಲಿ ಅವರ ಆಸ್ಪತ್ರೆ/ಕೇಂದ್ರ ನೊಂದಣಿಯಾಗುವವರೆಗೆ ಮತ್ತು ಬಾಲಿಕಾ ಸಾಫ್ಟ್ವೇರ್‌ನಲ್ಲಿ ಸದರಿ ಆಸ್ಪತ್ರೆ/ಕೇಂದ್ರಕ್ಕೆ ಆನ್‌ಲೈನ್ ಯುಸರ್‌ನೇಮ್ & ಪಾಸ್‌ವರ್ಡ ಬರುವವರೆಗೆ ಸ್ಕಾö್ಯನಿಂಗ್ ಯಂತ್ರ ಬಳಸತಕ್ಕದಲ್ಲ ಎಂದು ತಿಳಿಸಿದರು.
ಸದರಿ ವಿಷಯವನ್ನು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳು ಮತ್ತು ಡಿಐಎಂಸಿ ತಂಡದವರು ಅರ್ಜಿ ಸಲ್ಲಿಸಿರುವ ಆಸ್ಪತ್ರೆ/ಸ್ಕ್ಯಾನಿಂಗ್ ಕೇಂದ್ರಗಳ ಮಾಲೀಕರಿಗೆ ಮಾಹಿತಿ ನೀಡುವಂತೆ ಹಾಗೂ ನೊಂದಣಿ ಪಡೆಯದೇ ಸ್ಕ್ಯಾನಿಂಗ್ ಯಂತ್ರಗಳನ್ನು ಬಳಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಪಿಸಿ&ಪಿಎನ್‌ಡಿಟಿ ಕಾಯ್ದೆಯ ಕುರಿತು ಜಿಲ್ಲೆಯಾದ್ಯಂತೆ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಕಾಯ್ದೆಯ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಕಾಯ್ದೆಯ ನಿಯಮಗಳ ಕುರಿತು ಕರಪತ್ರಗಳನ್ನು ಮುದ್ರಿಸಿ ಜನಸಂದಣಿ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ ಒಳಗೊಂಡಂತೆ ವಿವಿಧ ಸ್ಥಳಗಳಲ್ಲಿ ಪ್ರಚುರಪಡಿಸುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು, ಲಿಂಗಾನುಪಾತದ ಸಮಾನತೆ ಕಾಪಾಡಲು ಜಾಗೃತಿ ಅಭಿಯಾನ ಕೈಗೊಳ್ಳಬೇಕು, ರೇಡಿಯೋ ಜಿಂಗಲ್ಸ್ ಮೂಲಕ ಪ್ರಚುರಪಡಿಸಬೇಕು, ಸಾರ್ವಜನಿಕ ಪ್ರದೇಶಗಳಲ್ಲಿ ವಿಡಿಯೋ ಪ್ರದರ್ಶನ ಮಾಡುವ ಮೂಲಕ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.