ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಮುಖ್ಯ ಕಚೇರಿಗೆ ಶುಕ್ರವಾರ ಆಕಸ್ಮಿಕ ಭೇಟಿ ನೀಡಿದ್ದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಮತ್ತು ಉದ್ಯಮಿ ಶಾಂತೇಶ ಕಳಸಗೊಂಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಜೊತಿಬಾ ಖಂಡಾಗಳೆ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಘವ ಅಣ್ಣಿಗೇರಿ ಅವರು, ಸಿದ್ಧಸಿರಿ ಸೌಹಾರ್ದ ಸಹಕಾರಿಯ ಸೇವೆಗಳು, ಸೌಲಭ್ಯಗಳು, ಸಾಮಾಜಿಕ ಕಾರ್ಯಗಳು ಹಾಗೂ ಸಹಕಾರಿಯ ಬೆಳವಣಿಗೆ ಕುರಿತು ಮಾಹಿತಿ ನೀಡಿ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯಲ್ಲಿ ಸಹಕಾರಿಯು, ಕರ್ನಾಟಕ ರಾಜ್ಯಾದ್ಯಂತ 165 ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, 1,480 ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ರೂ.64.83 ಕೋಟಿ ಶೇರು ಬಂಡವಾಳ, ರೂ.3,897 ಕೋಟಿ ಠೇವಣಿ ಹೊಂದಿದ್ದು, ರೂ.2,822 ಕೋಟಿ ಸಾಲ ವಿತರಿಸಲಾಗಿದೆ. ರೂ.4,042 ಕೋಟಿ ದುಡಿಯುವ ಬಂಡವಾಳ ಹೊಂದಿರುವ ನಮ್ಮ ಸಹಕಾರಿ, ಕೇವಲ 18 ವರ್ಷಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನರಲ್ ಮ್ಯಾನೇಜರ್ ಗಳಾದ ಉಮಾದೇವಿ ಹಿರೇಮಠ, ಉಮೇಶ ಹಾರಿವಾಳ, ಆರ್.ಟಿ.ಪಾಟೀಲ ಹಾಗೂ ಹಿರಿಯ ಅಧಿಕಾರಿಗಳಾದ ಮಂಜುನಾಥ ಪಾಟೀಲ, ಸಂದೀಪ್ ಗುಡೂರ ಅವರು ಉಪಸ್ಥಿತರಿದ್ದರು.

