Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನಗಳು ಯುವಜನಾಂಗಕ್ಕೆ ಮಾರ್ಗದರ್ಶಿ :ನರಸರಡ್ಡಿ
(ರಾಜ್ಯ ) ಜಿಲ್ಲೆ

ಶರಣರ ವಚನಗಳು ಯುವಜನಾಂಗಕ್ಕೆ ಮಾರ್ಗದರ್ಶಿ :ನರಸರಡ್ಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮಕ್ಕಳ, ಯುವಜನಾಂಗದ ಮನಸ್ಸನ್ನು ವಿಕಸನಗೊಳಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ೧೨ ನೇ ಶತಮಾನದ ಬಸವಾದಿ ಶರಣರು ರಚಿಸಿದ ವಚನಗಳು ಮಾರ್ಗದರ್ಶಿಯಾಗಿವೆ ಎಂದು ನರಸಲಗಿಯ ಎಸ್.ಡಿ.ಎಸ್.ಬಿ.ಸಂಯುಕ್ತ ಪಪೂ ಕಾಲೇಜಿನ ಪ್ರಾಚಾರ್ಯ ಎ.ಎಂ.ನರಸರಡ್ಡಿ ಹೇಳಿದರು.
ತಾಲೂಕಿನ ನರಲಸಗಿ ಗ್ರಾಮದ ಎಂ.ಡಿ.ಎಸ್.ಬಿ. ಸಂಯುಕ್ತ ಪಪೂ ಕಾಲೇಜಿನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಲಿಂ.ಸಿದ್ರಾಮಪ್ಪ ನಾಗಪ್ಪ ಕನ್ನೂರ, ಲಿಂ. ಸೋಮಪ್ಪ ಶಿವಪ್ಪ ಹೆಬ್ಬಾಳ, ಲಿಂ.ಮನೋಹರ ತವನಪ್ಪ ದಂಡಾವತಿ ಸ್ಮರಣಾರ್ಥ ಶನಿವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರು ರಚಿಸಿರುವ ವಚನಗಳ ಅರ್ಥಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಜೀವನವನ್ನು ಪಾವನಗೊಳಿಸಬೇಕಿದೆ. ನಾಡಿನಲ್ಲಿ ಶರಣ ಸಾಹಿತ್ಯ ಪರಿಷತ್ತು ಶರಣರ ಸಾಹಿತ್ಯವನ್ನು ಪ್ರಸರಣ ಮಾಡುವಲ್ಲಿ ತನ್ನ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಡಾ.ಫ.ಗು.ಹಳಕಟ್ಟಿ ಕುರಿತು ಅರುಂಧತಿ ಹತ್ತಿಕಾಳ ಮಾತನಾಡಿ, ಫ.ಗು.ಹಳಕಟ್ಟಿ ಅವರು ವಚನಗಳ ಸಂಗ್ರಹಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಡುವ ಮೂಲಕ ವಚನಗಳ ಸಂಗ್ರಹ ಮಾಡಿ ಅವುಗಳ ಸಂರಕ್ಷಣೆ ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಅದಕ್ಕಾಗಿ ಇವರನ್ನು ವಚನ ಗುಮ್ಮಟ ಎಂದು ಕರೆಯಲಾಗಿದೆ. ಅವರು ಸ್ವಂತಕ್ಕಾಗಿ ಬದುಕು ಸಾಗಿಸದೇ ಸಮಾಜಕ್ಕಾಗಿ ಬಾಳಿ ಬದುಕಿದರು. ಅದಕ್ಕಾಗಿ ಇಂದಿಗೂ ಅವರು ಚಿರಸ್ಮರಣೀಯರಾಗಿದ್ದಾರೆ ಎಂದರು.
೧೨ ನೇ ಶತಮಾನದ ವಚನಕಾರ್ತಿಯರ ಕುರಿತು ಡಾ.ವೀಣಾ ಗುಳೇದಗುಡ್ಡ ಮಾತನಾಡಿ, ಜಾತಿ,ಮತ ಎಣಿಸದೇ ಎಲ್ಲ ಜನಾಂಗದ ಶರಣೆಯರು ೧೨ ನೇ ಶತಮಾನದಲ್ಲಿ ವಚನಗಳನ್ನು ರಚಿಸಿದ್ದಾರೆ. ೩೬ ವಚನಕಾರ್ತಿಯರು ಇದ್ದರು. ಆಯ್ದಕ್ಕಿ ಲಕ್ಕಮ್ಮ, ದುಗ್ಗವ್ವೆ, ಸೂಳೆಸಂಕವ್ವೆ, ಕಸಗೂಡಿಸುವ ಸತ್ಯಕ್ಕ ಸೇರಿದಂತೆ ಅನೇಕ ಶರಣೆಯರು ಸಮಾಜಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ಮುಖಂಡ ಶ್ರೀಶೈಲಗೌಡ ಹೊಸಳ್ಳಿ ಮಾತನಾಡಿದರು.
ವೇದಿಕೆಯಲ್ಲಿ ಎಸ್.ಎಸ್.ಝಳಕಿ, ಎಚ್.ಎಸ್.ಬಿರಾದಾರ, ಪ್ರೊ.ಪಿ.ಎಲ್.ಹಿರೇಮಠ, ವಿವೇಕಾನಂದ ಕಲ್ಯಾಣಶೆಟ್ಟಿ, ಶರಣು ಬಸ್ತಾಳ, ಎಸ್.ಐ.ಮನಗೂಳಿ, ಸಾವಿತ್ರಿ ಕಲ್ಯಾಣಶೆಟ್ಟಿ, ಅಪ್ಪು ದಂಡಾವತಿ, ದೇವೇಂದ್ರ ಗೋನಾಳ ಇತರರು ಇದ್ದರು.
ಡಾ.ಅರ್ಜುನ ಉಳ್ಳಾಗಡ್ಡಿ ಸ್ವಾಗತಿಸಿದರು. ಆರ್‌.ಜಿ.ಅಳ್ಳಗಿ ಪ್ರಾಸ್ತವಿಕವಾಗಿ ಮಾತನಾಡಿದರು. ಸುಶ್ಮಿತಾ ಓದಿ ನಿರೂಪಿಸಿದರು. ಎಂ.ಸಿ.ಜಡಿಮಠ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.