ಪುರಸಭೆ ಹಾಗೂ ಗ್ರಾ.ಪಂ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದಲ್ಲಿ ಫ್ಲೆಕ್ಸ್ಗಳ ಬಳಕೆ ತಡೆಗಟ್ಟುವಿಕೆ, ಸ್ವಚ್ಛತೆ, ಸೌಂದರ್ಯೀಕರ ಹೆಚ್ಚಿಸುವಿಕೆ ತಾಲೂಕಿನ ಎಲ್ಲ ಗ್ರಾಮಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸುವದು ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಗಮನ ಹರೆಸಬೇಕು ಎಂದು ಪುರಸಭೆ ಹಾಗೂ ಗ್ರಾ.ಪಂ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಸೂಚಿಸಿದರು.
ಪಟ್ಟಣದ ಎಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಅತಿಯಾದ ಫ್ಲೆಕ್ಸ್ಗಳ ಬಳಕೆಯಾಗಿದ್ದು ಈ ರೀತಿಯಾಗದಂತೆ ಹೈಕೋರ್ಟ್ ನಿರ್ದೇಶನ ನೀಡಿದ್ದರೂ ಯಾವುದೇ ಕ್ರಮವನ್ನೇಕೆ ವಹಿಸಿಲ್ಲ ಎಂದು ಇಲ್ಲಿನ ಪುರಸಭೆ ಮುಖ್ಯಾಧಿಕಾರಿಗೆ ತೀರ್ವ ತರಾಟೆಗೆ ತೆಗೆದುಕೊಂಡರು. ಶಾಲಾ ಕಟ್ಟಡಗಳು ಸೋರುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರುವ ಬಗ್ಗೆ ವಿವರಗಳನ್ನು ಸಲ್ಲಿಸುವಂತೆ ಬಿಇಓ ಅವರಿಗೆ, ತಾಲೂಕಿನ ಎಲ್ಲೆಡೆ ಕಸ ವಿಲೇವಾರಿ, ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ದೂರುಗಳ ಬಗ್ಗೆ, ಉತಾರಾ, ಖಾತಾ, ಬದಲಾವಣೆ ಸೇರಿದಂತೆ ಇತರೆ ಸೇವೆಗಳಲ್ಲಿ ಸಾರ್ವಜನಿಕರನ್ನು ಅಲೆದಾಡಿಸುವದು ವ್ಯಥಾ ಕಾಗದಗಳನ್ನು ಪೆಂಡಿAಗ್ ನಲ್ಲಿರಿಸಿದರೆ ಸಂಬAಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದರು.
ಈ ವೇಳೆ ಡಿಎಸ್‌ಎಸ್ ಮುಖಂಡ ಹರೀಶ ನಾಟೆಕಾರ ಪಟ್ಟಣದ ಅಂಬೇಡ್ಕರ್ ವೃತ್ತದ ಕಾಮಗಾರಿ ಬಿಲ್ ಪಾವತಿ ಮಾಡದ ಕುರಿತು ದೂರಿ ಮನವಿ ಪತ್ರ ಸಲ್ಲಿಸಿದರು. ಹಲವು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಿಶಿ ಆನಂದ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
“ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ಆಯಾ ಗ್ರಾಮಗಳಲ್ಲಿ ವಾಸ್ತವ್ಯ ಹೂಡಬೇಕು. ಬೇರೆಡೆಗೆ ಇದ್ದು ಸೇವೆಗಳಿಗೆ ಮತ್ರ ಗ್ರಾಮಕ್ಕೆ ಹೋಗುವಂತಿಲ್ಲ.”
– ಬಿ.ಎಸ್.ಪಾಟೀಲ
ಲೋಕಾಯುಕ್ತ ನ್ಯಾಯಮೂರ್ತಿಗಳು.

