ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಇಲ್ಲಿಯ ಬೇನಾಳ ಬ್ರಿಜ್ ಬಳಿಯ
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಸೋಮವಾರ ಜರುಗಿದೆ.
ಮೃತಪಟ್ಟವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತಿ (೫), ರಕ್ಷಾ ನಿಂಗರಾಜ ಭಜಂತ್ರಿ (೩), ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ (೧೩ ತಿಂಗಳು) ಮೃತಪಟ್ಟಿದ್ದಾರೆ.
ಕಾಲುವೆಗೆ ಬಿದ್ದಿದ್ದ ಮೃತ ಮಕ್ಕಳ ತಾಯಿ ಭಾಗ್ಯ ಳನ್ನು ಮೀನುಗಾರರು ಕಾಲುವೆ ನೀರಿನಿಂದ ಎತ್ತಿ ಬದುಕಿಸಿದ್ದಾರೆ.
ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎನ್ನಲಾಗಿದೆ.
ತಾಯಿ ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಜಿಗಿದದ್ದರಿಂದ ಈ ದುರ್ಘಟನೆ ಸಂಭವಿಸಿದೆ.

