ಉದಯರಶ್ಮಿ ದಿನಪತ್ರಿಕೆ
ಇಂಡಿ: ದೇಶದಾದ್ಯಂತ ಮಹಾನ್ ಅಧ್ಯಾತ್ಮಿಕ ನಾಯಕ, ತತ್ವಜ್ಞಾನಿ, ಚಿಂತಕ ಹಾಗೂ ವಿಶ್ವ ಸನ್ಯಾಸಿ ಸ್ವಾಮಿ ವಿವೇಕಾನಂದರ 162 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳು ಯಾವಾಗಲೂ ಯುವಕರನ್ನು ಪ್ರೇರೇಪಿಸುವಂತಿವೆ. ಜೊತೆಗೆ ಅವರಲ್ಲಿ ಹೊಸ ಶಕ್ತಿ ಮತ್ತು ಪ್ರಜ್ಞೆಯನ್ನು ತುಂಬುತ್ತಿವೆ ಎಂದು ಗ್ರಾಮೀಣ ಠಾಣಾ ಕ್ರೈಮ್ ಪಿ ಎಸ್ ಐ ಗೋಳಸಂಗಿ ಹೇಳಿದರು.
ಭಾನುವಾರ ಗ್ರಾಮೀಣ ಪೋಲಿಸ್ ಠಾಣಾ ಆವರಣದಲ್ಲಿ ಸ್ವಾಮಿ ವಿವೇಕಾನಂದರ 162 ನೇ ಜಯಂತಿ ಪ್ರಯುಕ್ತ ವಿಧ್ಯಾರ್ಥಿಗಳೊಂದಿಗೆ ಸಸಿ ನೆಟ್ಟು ಯುವ ದಿನಾಚರಣೆ ಆಚರಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರ ಜಯಂತಿಯನ್ನು ಭಾರತದಲ್ಲಿ ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಯುವ ದಿನದಂದು, ವೈಯಕ್ತಿಕ ಅಭಿವೃದ್ಧಿ, ಸಮಾಜ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಧನಾತ್ಮಕವಾಗಿ ಕೊಡುಗೆ ನೀಡಲು ಯುವಕರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ ಎಂದು
ಹೇಳಿದರು.
ಈ ಸಂದರ್ಭದಲ್ಲಿ ವಿಧ್ಯಾರ್ಥಿ ಬಸವರಾಜ ಕಂಠಿಕಾರ, ಸಚೀನ ಅವರಾಧಿ ಅನೇಕ ವಿಧ್ಯಾರ್ಥಿಗಳು ಹಾಗೂ ಹವಾಲ್ದಾರ್ ವಿಠ್ಠಲ ಹೊಸಮನಿ, ಸಿದ್ದು ವಾಲಿಕಾರ, ಸಂಜು ತಳವಾರ, ಪ್ರಕಾಶ್ ನಾಯಕ ಉಪಸ್ಥಿತರಿದ್ದರು.

