Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಯ ವೈಖರಿ ಸುಧಾರಿಸದ ಸಚಿವರು ಸಂಪುಟದಿಂದ ಔಟ್!
(ರಾಜ್ಯ ) ಜಿಲ್ಲೆ

ಕಾರ್ಯ ವೈಖರಿ ಸುಧಾರಿಸದ ಸಚಿವರು ಸಂಪುಟದಿಂದ ಔಟ್!

By Updated:No Comments4 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಕ್ಷದ ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ | ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಖಡಕ್ ಎಚ್ಚರಿಕೆ

ಬೆಂಗಳೂರು: ಸಚಿವರು ಕಾರ್ಯ ವೈಖರಿಯನ್ನು ಸುಧಾರಿಸದಿದ್ದರೆ ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಎಚ್ಚರಿಕೆ ನೀಡಿದ್ದಾರೆ.
ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಪಕ್ಷದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಸಮಾವೇಶದ ಪೂರ್ವಭಾವಿ ಸಿದ್ಧತೆ ಸಭೆಯ ಭಾಗವಾಗಿ ಸೋಮವಾರ ನಡೆದ ಕೆಪಿಸಿಸಿ ಸಭೆಯನ್ನುದ್ದೇಶಿಸಿ ಸುರ್ಜೇವಾಲಾ ಆವರು ಮಾತನಾಡಿದರು.
ಸಭೆಯಲ್ಲಿ ಎಲ್ಲರ ಸಮ್ಮುಖದಲ್ಲೇ ಸಚಿವರ 20 ತಿಂಗಳ ಕಾರ್ಯವೈಖರಿ ಹಾಗೂ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಕುರಿತ ವರದಿಯನ್ನು ಡಿಕೆ.ಶಿವಕುಮಾರ್ ಅವರು ಸುರ್ಜೇವಾಲಾ ಅವರಿಗೆ ಸಲ್ಲಿಸಿದರು.
ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಸುರ್ಜೇವಾಲಾ ಅವರು, ಸಚಿವರ ಕಾರ್ಯಕ್ಷಮತೆಯ ಕುರಿತ ವರದಿಗಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳಿದರು. 60 ದಿನಗಳಲ್ಲಿ ಎಲ್ಲಾ ಸಚಿವರನ್ನು ಪ್ರತ್ಯೇಕವಾಗಿ ಕರೆಯಿಸಿ ಚರ್ಚೆ ಮಾಡುತ್ತೇನೆಂದು ಹೇಳಿದರು. ಇದೇ ವೇಳೆ ಪಕ್ಷದ ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಎಚ್ಚರಿಕೆ ನೀಡಿದರು.
ನಮಗೆ ಕಾರ್ಯಕರ್ತರು ಮುಖ್ಯ, ಸರ್ಕಾರದ ದೌರ್ಬಲ್ಯಕ್ಕೆ ಅವಕಾಶ ಕೊಡಲು ಸಾಧ್ಯವಿಲ್ಲ ಎಂದರು.
ಬಳಿಕ ಸೋನಿಯಾ ಗಾಂಧಿ ತ್ಯಾಗದ ಉದಾಹರಣೆ ನೀಡಿದ ಅವರು, ಪಕ್ಷದ ಹಿತಕ್ಕಾಗಿ ಕೆಲವೊಮ್ಮೆ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ” ಎಂದು ಹೇಳಿದರು.
ಸಂಪುಟ ಪುನಾರಚನೆ ಅನಿವಾರ್ಯವಿದ್ದು, ಫಲಿತಾಂಶ ತೋರದ ಸಚಿವರು ತಮ್ಮ ಸ್ಥಾನಕ್ಕೆ ವಿದಾಯ ಹೇಳಬೇಕಾಗುತ್ತದೆ. ರಾಜ್ಯದ ಜನರಿಗೆ, ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಸಚಿವರನ್ನು ಮೌಲ್ಯಮಾಪನ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಚಿವರನ್ನು ಕೆಪಿಸಿಸಿ ಕಚೇರಿಕೆ ಕರೆಯಲಾಗುವುದು. ಜನರ ಒಳಿತಿಗಾಗಿ ಏನು ಮಾಡಿದ್ದಾರೆ, ಪಕ್ಷದ ನೀತಿಗಳನ್ನು ಪ್ರಚಾರ ಮಾಡಿರುವುದು, ಕಾರ್ಯಕರ್ತರಿಗೆ ಸಹಾಯ ಮಾಡಿರುವುದರ ಕುರಿತು ಪರಿಶೀಲಿಸಲಾಗುವುದು. ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳದಿದ್ದರೆ, ಸಚಿವರ ವಿರುದ್ಧದ ಕಾರ್ಯಕರ್ತರು ದೂರುಗಳು ಮುಂದುವರೆಯುತ್ತಲೇ ಇರುತ್ತದೆ ಎಂದರು
ಶಾಸಕರು, ಸಚಿವರು, ನಾಯಕರು ಯಾರೂ ಪಕ್ಷದ ಶಿಸ್ತು ಮೀರಬಾರದು. ಪಕ್ಷ ತಾಯಿ ಇದ್ದಂತೆ. ಸರ್ಕಾರ ಮಗು ಇದ್ದಂತೆ. ಯಾವ ನಾಯಕರೂ ಪಕ್ಷವನ್ನು ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಬಾರದು. ಪಕ್ಷವನ್ನು ನೆಲಸಮ ಮಾಡಲು ಮುಂದಾದರೆ ನಾವು ಸಹಿಸುವುದಿಲ್ಲ. ನಮ್ಮ ನಾಯಕರಲ್ಲಿ ಕೆಲವರಿಗೆ ಶಿಸ್ತು ಇಲ್ಲ. ಪಕ್ಷಕ್ಕಿಂತ ನಾವು ದೊಡ್ಡವರು ಎಂಬ ಭಾವನೆ ಕೆಲವರಲ್ಲಿ ಇದ್ದಂತಿದೆ. ಈಗಲೂ ನಾನು ಮನವಿ ಮಾಡುತ್ತೇನೆ. ಶಾಸಕರು, ನಾಯಕರು, ಸಚಿವರು ಯಾರೂ ಶಿಸ್ತು ಮೀರಬಾರದು. ಕಾರ್ಯಕರ್ತರನ್ನು ಗೌರವಯುತವಾಗಿ ಕಾಣಬೇಕೆಂದು ಮನವಿ ಮಾಡಿದರು.
ಶಿಸ್ತು ಮೂಲ ಮಂತ್ರವಾಗಬೇಕು. ಅದು ಇಲ್ಲದೆ ಪಕ್ಷ ಉಳಿಯುವುದಿಲ್ಲ. ಕಾಂಗ್ರೆಸ್ ಆರ್‌ಎಸ್‌ಎಸ್ ಮತ್ತು ಬಿಜೆಪಿಗಿಂತ ಭಿನ್ನವಾಗಿದೆ, ಮೋದಿ, ಶಾ ಮತ್ತು ಆರ್‌ಎಸ್‌ಎಸ್ ವಿರುದ್ಧ ಯಾರಾದರೂ ಮಾತನಾಡಿದರೆ ಅಲ್ಲಿ ನಾಯಕರನ್ನು ಪಕ್ಷದಿಂದ ಹೊರಹಾಕಲಾಗುತ್ತದೆ. ಆದರೆ, ಕಾಂಗ್ರೆಸ್‌ನಲ್ಲಿ ನಾವು ಪ್ರಾಮಾಣಿಕವಾಗಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆಂದು ತಿಳಿಸಿದರು.
ರಾಜ್ಯಾದ್ಯಂತ ಕಾಂಗ್ರೆಸ್ ಭವನ ಸ್ಥಾಪಿಸಿ. 100 ಕಾಂಗ್ರೆಸ್ ಭವನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಕಟ್ಟಡಕ್ಕೆ ಬೇಕಾದ ಭೂಮಿ ಗುರುತಿಸಲಾಗಿದೆ. ಮುಂದಿನ ವರ್ಷದೊಳಗೆ ಪಾರ್ಟಿಯನ್ನು ಬಲಿಷ್ಠ ಮಾಡಿ.‌ ಕರ್ನಾಟಕದಲ್ಲಿ ಪಕ್ಷವನ್ನು ಭದ್ರಗೊಳಿಸಿ. 2025ಕ್ಕೆ ಬೂತ್ ಮಟ್ಟದಲ್ಲಿ ಪಕ್ಷ ಸದೃಢಗೊಳಿಸಬೇಕು ಎಂದರು.
ದೂರ ಇದೆ ಎಂದು ಯಾರೂ ಸುಮ್ಮನೆ ಕೂರುವಂತಿಲ್ಲ. ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲೇಬೇಕು. ಪ್ರತಿ ಗ್ರಾಮ, ವಾರ್ಡ್​ಗಳಲ್ಲಿ ಕಮಿಟಿ ರಚನೆಯಾಗಬೇಕು. ಪಂಚಾಯತ್ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂದು ಕರೆ ನೀಡಿದರು.
ಸಂವಿಧಾನ ಎಂದರೆ ಕೇವಲ ಪೇಪರ್ ಅಲ್ಲ. ಎಲ್ಲ ಜನ, ಸಮುದಾಯಕ್ಕೆ ಸ್ಚಾತಂತ್ರ ಕೊಟ್ಟಿರುವುದು ಸಂವಿಧಾನ. ಕೇಂದ್ರದಲ್ಲಿ ಎಲ್ಲ ಪ್ರಮುಖ ಸ್ಥಾನ ಮೇಲ್ವರ್ಗಕ್ಕಿದೆ. ಜನರಲ್ ಕೆಟಗರಿ ಐಎಎಸ್ ಇದ್ದಾರೆ. ಆರ್​ಎಸ್​​ಎಸ್​ನವರು ಸೆಕ್ರೆಟರಿಗಳಾಗಿದ್ದಾರೆ. ಪ್ರಮುಖ ಸ್ಥಾನಗಳು ಎಸ್ಸಿ ಎಸ್ಟಿ, ಒಬಿಸಿಗೆ ಸಿಗ್ತಿಲ್ಲ. ಖಾಸಗಿಯಲ್ಲೂ ಈ ಸಮುದಾಯಗಳಿಗೆ ಬೆಲೆ ಇಲ್ಲ. ಖಾಸಗಿ ವಲಯದಲ್ಲಿ ಅದಾನಿ ಅಂತವರಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲಿ ಸಿಗ್ತಿದೆ. ಬಿಜೆಪಿ ಸರ್ಕಾರದಲ್ಲಿ ಎಸ್​​ಸಿ ಮತ್ತು ಒಬಿಸಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಕಟ್ ಮಾಡಿದ್ದಾರೆ. ಮನುಸ್ಮೃತಿಯನ್ನು ಎಲ್ಲೆಡೆ ತರ್ತಿದ್ದಾರೆ ಎಂದು ಕಿಡಿ ಕಾರಿದರು.

” ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆಯಲ್ಲಿನ ಪಕ್ಷದ ಗೆಲುವಿನ ಶ್ರೇಯಸ್ಸು ಯಾವುದ ವ್ಯಕ್ತಿಗೆ ಸಲ್ಲಬಾರದು. ಸಚಿವರು ಮತ್ತು ಕಾರ್ಯಕರ್ತರು ಸೇರಿದಂತ ಇಡೀ ನಾಯಕತ್ವಕ್ಕೆ ಸಲ್ಲಬೇಕು.”

– ಸಿದ್ದರಾಮಯ್ಯ
ಮುಖ್ಯಮಂತ್ರಿಗಳು

ಹೆಬ್ಬಾಳ್ಕರ್-ಜಾರಕಿಹೊಳಿ ಜಟಾಪಟಿಯಿಂದ ಪಕ್ಷಕ್ಕೆ ಮುಜುಗರ!

ಬೆಂಗಳೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂಬ ಸಂದೇಶ ರವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣದಾಟ ಬಹಿರಂಗವಾಗಿದೆ.
ಸಭೆಯನ್ನುದ್ದೇಶಿಸಿ ಮಾತಾಡಿದ ಡಿಕೆ.ಶಿವಕುಮಾರ್ ಅವರು, ನೂತನ 100 ಕಚೇರಿಗಳ ಸ್ಥಾಪನೆ ವಿಚಾರವಾಗಿ ಮಾತನಾಡುತ್ತಾ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಲಕ್ಷ್ಮೀ ಹೆಬ್ಬಾಳ್ಕರ್ ನಿರ್ಮಿಸಿದ್ದಾರೆಂದು ಹೇಳಿದರು. ಇದಕ್ಕೆ ಸತೀಶ್ ಜಾರಕಿಹೊಳಿ ಆಕ್ಷೇಪ ಎತ್ತಿದರು ಎಂದು ಹೇಳಿದರು.
ಪದೇ ಪದೇ ಕಾಂಗ್ರೆಸ್ ಕಚೇರಿಯನ್ನು ಹೆಬ್ಬಾಳ್ಕರ್ ಕಟ್ಟಿದರು ಎಂದು ಹೇಳಬೇಡಿ. ಈ ವಿಚಾರ ಒಂದ್ಸಲ ಕೇಳಿಸ್ಕೊಂಬಿಡಿ. ಜಿಲ್ಲಾ ಕಾಂಗ್ರೆಸ್​​ ಕಚೇರಿ ಕಟ್ಟಲು ಜಾಗ ಕೊಟ್ಟಿದ್ದು, ಇವತ್ತಿನ ಬಿಜೆಪಿ ಶಾಸಕ ನಮ್ಮ ಸೋದರ ರಮೇಶ್ ಜಾರಕಿಹೊಳಿ‌. ಕಟ್ಟಡ ಕಟ್ಟಲು ಮೂರು ಕೋಟಿ ಹಣ ಸುರಿದಿದ್ದು ನಾನು. ಇಲ್ಲಿ ಪದೇ ಪದೇ ಹೆಬ್ಬಾಳ್ಕರ್ ಕಟ್ಟಿದ್ರು, ಹೆಬ್ಬಾಳ್ಕರ್​​​ ಕಟ್ಟಿದ್ರು ಅಂತ ಹೇಳಿ ಅವಮಾನಿಸಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದಬಂದಿದೆ.
ಈ ವೇಳೆ ಮಾತನಾಡಿದ ಹೆಬ್ಬಾಳ್ಕರ್ ಅವರು, ಜವಾಬ್ದಾರಿ ತೆಗೆದುಕೊಳ್ಳುವಾಗ ಅಲ್ಲಿ ಸರಿಯಾಗಿ ವಿದ್ಯುತ್ ಕೂಡ ಇರಲಿಲ್ಲ. ಕನಿಷ್ಠ ಮೂಲಸೌಕರ್ಯವೂ ಇರಲಿಲ್ಲ. ನಾನು ಮೊದಲ ಬಾರಿ ಸಚಿವೆಯಾಗಿ, ಜಿಲ್ಲೆಯಲ್ಲಿ ಕಡಿಮೆ ಅವಧಿಯಲ್ಲಿ ಪಕ್ಷದ ಕಚೇರಿ ನಿರ್ಮಾಣ ಮಾಡಲಾಗಿದೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರು.
ಲಕ್ಷ್ಮೀ ಹೆಬ್ಬಾಳ್ಕರ್‌ ಮಾತಿಗೆ ಜಾರಕಿಹೊಳಿ ಅವರು ಅಸಮಾಧಾನಗೊಂಡರು. ಜಾಗ ಕೊಟ್ಟಿದ್ದು ನಾನು, ನಂತರ ಪಕ್ಷದ ಕಚೇರಿ ನಿರ್ಮಾಣ ಆಗಿದೆ ಎಂದು ಕೊಟ್ಟರು. ಇದೇ ವೇಳೆ ಪಕ್ಷಕ್ಕಾಗಿ ತಾವು ನೀಡಿರುವ ಕೊಡುಗೆಯನ್ನು ವಿವರಿಸಿದರು.
ಬಳಿಕ ಸತೀಶ್ ಜಾರಕಿಹೊಳಿ, ಎಂಎಲ್‌ಸಿ ಎಂಆರ್ ಸೀತಾರಾಂ ಸೇರಿದಂತೆ ಹಿರಿಯ ನಾಯಕರ ಸಲಹೆಯ ಹೊರತಾಗಿಯೂ ಲಕ್ಷ್ಮಿ ಅವರು ವೇದಿಕೆಗೆ ತೆರಳಿ ಡಿಸಿಸಿ ಭವನ ನಿರ್ಮಾಣಕ್ಕೆ ತಾವು ನೀಡಿ ಕೊಡುಗೆಯನ್ನು ವವರಿಸಿದರು. ಡಿಕೆ.ಶಿವಕುಮಾರ್ ಅವರ ಸಲಹೆಗೂ ಕಿವಿಗೊಡಲಿಲ್ಲ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷೆಯಾಗಿ ಅಂದಿನ ಸಚಿವ ವಿನಯಕುಮಾರ್ ಸೊರಕೆ ಅವರ ನೆರವಿನಿಂದ ಸೂಕ್ತ ಬೆಲೆಗೆ ನಿವೇಶನ ದೊರಕಿಸಿ, ಹಣ ಕ್ರೋಡೀಕರಿಸಿ ಕಾಂಗ್ರೆಸ್ ಕಚೇರಿ ನಿರ್ಮಿಸಿದ್ದೇನೆ ಎಂದು ಲಕ್ಷ್ಮೀ ಅವರು ಹೇಳಿದರು.
“ನಮ್ಮ ಪ್ರಯತ್ನಕ್ಕೆ ಮನ್ನಣೆ ಸಿಗಬೇಕಲ್ಲವೇ?” ಎಂದು ಪ್ರಶ್ನಿಸಿದರು.
ಬಳಿಕ ಸಿಎಂ, ಡಿಸಿಎಂ ಮತ್ತು ಸುರ್ಜೇವಾಲಾ ಅವರು ಮಧ್ಯಪ್ರವೇಶಿಸಿ, ಪರಿಸ್ಥಿತಿ ಶಾಂತಗೊಳಿಸಿದರು ಎಂದು ತಿಳಿದುಬಂದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.