Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅನನ್ಯ
(ರಾಜ್ಯ ) ಜಿಲ್ಲೆ

ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅನನ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವವನ್ನು ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅನನ್ಯ. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಅಂತವರ ತತ್ವಾದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಮಾಡಿದಕ್ಕೆ ಸಾರ್ಥಕವಾಗುತ್ತದೆ ಎಂದು ಎಚ್.ಜಿ.ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ೮೫೩ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವೇಶ್ವರರು ಹಾಗೂ ಸಿದ್ದರಾಮೇಶ್ವರರು ಕಾಯಕಯೋಗಿ ಶ್ರೇಷ್ಠ ವಚನಕಾರರಾಗಿದ್ದರು. ಹಾಗೆಯೇ ಎಲ್ಲ ಶರಣರು ಅವರನ್ನು ಅಪ್ಪಿಕೊಂಡಿದ್ದರು. ಬುದ್ಧ ಬಸವ ಡಾ. ಅಂಬೇಡ್ಕರರು, ಅಲ್ಲಮಪ್ರಭು, ಚೆನ್ನಬಸವ, ಅಕ್ಕ ಮಹಾದೇವಿ ಸೇರಿದಂತೆ ಅನೇಕ ಶರಣರು ಸಮ ಸಮಾಜದ ನಿರ್ಮಾಣಕ್ಕೆ ಎಲ್ಲ ಸಮಾಜದ ಸಮಾನತೆಯಲ್ಲಿ ಬೆಳಕು ಚೆಲ್ಲಿದ್ದಾರೆ. ಅವರಂತೆ ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿಪಡುತ್ತಿದ್ದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಚೆನ್ನಬಸವಣ್ಣನವರ ನಂತರ ಅದ್ಯಕ್ಷರಾಗಿ ಕಾರ್ಯನಿರ್ವಹಿಸಿ ಸೊನ್ನಲಗಿ ಸಿದ್ದರಾಮೇಶ್ವರರು ಸಮಾಜದಲ್ಲಿ ಜಾಡುಗಟ್ಟಿದ ಕಂದಾಚಾರ, ಮೂಡನಂಬಿಕೆ, ಅನಾಚಾರಗಳನ್ನು ಹೊಡೆದೊಡಿಸಲು ವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿ ಶಿವಯೋಗಿ ಸಿದ್ದರಾಮ ಎನಿಸಿಕೊಂಡಿದ್ದಾರೆ. ಅದಕ್ಕೆ ಭೋವಿ ವಡ್ಡರ ಸಮಾಜದವರು ಹೆಚ್ಚು ಕೆಲಸಕ್ಕೆ ಒತ್ತು ಕೊಡದೇ ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿ ಮೂರನೇ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಮನುಕುಲಕ್ಕೆ ಉದ್ದಾರ ಮಾಡದೇ ಪ್ರಾಣಿ, ಪಶು, ಪಕ್ಷಿಗಳಿಗಾಗಿ ನೀರಾವರಿ ಯೋಜನೆಗಳಂತಹ ಅರವಟ್ಟಿಗಳನ್ನು ನಿರ್ಮಿಸಿ ಚೆನ್ನಬಸವಣ್ಣನವರ ಪರಮ ಶಿಶ್ಯರಾಗಿ ಸಾಮಾಜಿಕವಾಗಿ ವಚನಗಳ ಮೂಲಕ ಉದ್ಧಾರ ಮಾಡಿದ್ದಾರೆ. ಸಿದ್ದರಾಮೇಶ್ವರರು ಕಾಯಕಯೋಗಿಗಳು, ಕರ್ಮಯೋಗಿಗಳು ಅವರಂತೆ ಅವರ ಸಮುದಾಯದ ಯುವ ಪೀಳಿಗೆ ಇತಿಹಾಸವನ್ನು ಅರಿತು ಜೀವನ ನಡೆಸಬೇಕು ಎಂದು ಹೇಳಿದ ಅವರು, ಭೂ ದಾಖಲೆಗಳನ್ನು ತ್ವರಿತಗತಿಯಲ್ಲಿ ಸಿಗುವ ನಿಟ್ಟಿನಲ್ಲಿ ಗಣಕೀಕರಣ ಮಾಡುವ ಮೂಲಕ ಭೂ ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಿ ಸರಕಾರದ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಕಾರ್ಯಕ್ಕೆ ಮುಂದಾದ ಮುಖ್ಯಮಂತ್ರಿಗಳಿಗೆ, ಕಂದಾಯ ಸಚಿವ ಕೃಷ್ಣಾ ಬೈರೆಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗ ಶರಣರು ಆಶೀವರ್ಚನ ನೀಡಿದರು. ವೇದಿಕೆಯ ಮೇಲೆ ತಾಪಂ ಇಒ ರಾಮು ಅಗ್ನಿ, ಗ್ರೇಡ್ ೨ ತಹಶೀಲ್ದಾರ ಇಂದ್ರಾಬಾಯಿ ಬಳಗಾನೂರ, ಬಸವ ಸಮಿತಿ ಸದಸ್ಯ ಶಿವಾನಂದ ಕಲಬುರ್ಗಿ, ಸರಕಾರಿ ನೌಕರರ ಸಂಘದ ತಾಲೂಕಾದ್ಯಕ್ಷ ಅಶೋಕ ತೆಲ್ಲೂರ, ಭೋವಿ ಸಮಾಜದ ತಾಲೂಕಾದ್ಯಕ್ಷ ಪಂಡಿತ ಯಂಪೂರೆ ಇದ್ದರು.
ಈ ವೇಳೆ ಕಂದಾಯ ನಿರೀಕ್ಷಕ ಐ.ಎ.ಮಕಾಂದಾರ, ಚಂದ್ರಶೇಖರ ನಾಗರಬೆಟ್ಟ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ರಾಜಶೇಖರ ಚೌರ, ಅಶೋಕ ಅಲ್ಲಾಪುರ, ಎಂ.ಎಂ.ಹಂಗರಗಿ, ನಿಖಿಲ ಖಾನಾಪುರ, ಶಬ್ಬೀರಪಟೇಲ್ ಬಿರಾದಾರ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಸುನಂದಾ ಯಂಪುರೆ, ಸಾಬಿಯಾ ಮರ್ತುರ, ರಾಜಶೇಖರ ನರಗೋದಿ, ಎಂ.ಎ.ಗೊಟಗುಣಕಿ, ಪ್ರವೀಣ ಹಾಲಹಳ್ಳಿ, ಶೈಲಜಾ ಸ್ಥಾವರಮಠ, ಜಗದೀಶ ಕಲಬುರ್ಗಿ, ಶ್ರೀಶೈಲ ಯಳಮೇಲಿ, ಮಹಾನಂದ ಬಮ್ಮಣ್ಣಿ, ಸೇರಿದಂತೆ ಭೋವಿ ಸಮಾಜದ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ಎಚ್.ಜಿ.ಕನ್ಯಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಬಸವರಾಜ ಸೋಂಪುರ ನಿರೂಪಿಸಿದರು. ಬಿಇಓ ಮಹಾಂತೇಶ ಯಡ್ರಾಮಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.