Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಕ್ರಾಂತಿ ರೈತವರ್ಗದ ಜನರ ಹಬ್ಬ :ಪ್ರೊ.ಕುಲಕರ್ಣಿ
(ರಾಜ್ಯ ) ಜಿಲ್ಲೆ

ಸಂಕ್ರಾಂತಿ ರೈತವರ್ಗದ ಜನರ ಹಬ್ಬ :ಪ್ರೊ.ಕುಲಕರ್ಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣದ ಕಡೆಗೆ ಪಥ ಬದಲಿಸುತ್ತಾನೆ. ಆದ್ದರಿಂದ, ಮಕರ ಸಂಕ್ರಾಂತಿಯನ್ನು ಉತ್ತರಾಯಣ ಸಂಕ್ರಮಣ ಎಂದೂ ಕರೆಯುತ್ತೇವೆ. ಮಕರ ಸಂಕ್ರಾಂತಿಯಂದು ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ಸಂಕ್ರಾಂತಿ ರೈತವರ್ಗದ ಜನರ ಹಬ್ಬ. ತಾವು ಬೆಳೆದ ದವಸ, ಧಾನ್ಯಗಳನ್ನು ಪೂಜಿಸುವ ಹಬ್ಬ. ಸಂಕ್ರಾಂತಿ, ಹೊಸ ಬೆಳೆಗಳು ಬೆಳೆದು ರೈತಾಪಿ ವರ್ಗಕ್ಕೆ ಸಿಗುವ ಕಾಲವಾಗಿದೆ ಎಂದು ಶ್ರೀಪದ್ಮರಾಜ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕ ಗಿರೀಶ ಎಸ್.ಕುಲಕರ್ಣಿ ಹೇಳಿದರು.
ಸಿಂದಗಿ ಪಟ್ಟಣದ ಸಾರಂಗಮಠದ ಆವರಣದಲ್ಲಿ ಪೂಜ್ಯ ಶ್ರೀಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಾರಂಗಮಠ-ಗಚ್ಚಿನಮಠದ ವತಿಯಿಂದ ಹಮ್ಮಿಕೊಂಡ ೩೩೮ನೆಯ ಸದ್ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮಕರ ಸಂಕ್ರಾಂತಿ ಹಬ್ಬದ ಮಹತ್ವವನ್ನು ಕುರಿತಾಗಿ ಮಾತನಾಡಿದ ಅವರು, ಮಕರ ಸಂಕ್ರಾಂತಿಯ ದಿನ ಪವಿತ್ರ ಸ್ನಾನಕ್ಕೆ ಬಹಳ ಮಹತ್ವ. ಅಂದು ಸಾಕಷ್ಟು ಜನ ಪವಿತ್ರ ನದಿಗಳಲ್ಲಿ ಸ್ನಾನ ಮಾಡಿ ಹಬ್ಬವನ್ನು ಆಚರಿಸುತ್ತಾರೆ. ಇದು ಶುದ್ಧೀಕರಣದ ಸಂಕೇತ. ಬರೀ ದೇಹವಷ್ಟೇ ಅಲ್ಲ, ಮನಸ್ಸನ್ನೂ ಶುದ್ಧೀಕರಿಸುವ ಸಂಕೇತವಾಗಿ ಪವಿತ್ರ ನದಿ ಸ್ನಾನಕ್ಕೆ ಮಹತ್ವವಿದೆ. ಮಕರ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಧಾರ್ಮಿಕ, ಸಾಂಸ್ಕೃತಿಕ ಹಬ್ಬ. ಕರ್ನಾಟಕದಲ್ಲಿ ಮಕರ ಸಂಕ್ರಾಂತಿ ಎಂದೂ, ತಮಿಳುನಾಡಿನಲ್ಲಿ ಪೊಂಗಲ್ ಎಂದೂ, ಆಂಧ್ರದಲ್ಲಿ ಸಂಕ್ರಮಣ ಕಾಲಾಲು ಎಂದೂ ಕರೆಯಲ್ಪಡುವ ಈ ಹಬ್ಬಕ್ಕೆ ವಿಶೇಷ ಅರ್ಥ, ಸಂಭ್ರಮ ಇದೆ. ಆಚರಣೆಯಲ್ಲಿ ಹಲವು ಪದ್ಧತಿಗಳಿವೆ ಎಂದರು.
ಈ ವೇಳೆ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಈ ವೇಳೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಿ.ಎಸ್.ಡಬ್ಲೂö್ಯ ಪರೀಕ್ಷೆಯಲ್ಲಿ ರ‍್ಯಾಂಕ ಬಂದ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ೩ನೆಯ ರ‍್ಯಾಂಕ ಪಡೆದ ಐಶ್ವರ್ಯ ತಮದೊಡ್ಡಿ, ೪ನೆಯ ರ‍್ಯಾಂಕ ಪಡೆದ ವಿದ್ಯಾಶ್ರೀ ಪಡಶೆಟ್ಟಿ ಅವರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದಾಸೋಹ ಸೇವೆಯನ್ನು ಲಿಂ.ಹೊನ್ನಪ್ಪಗೌಡ ಬಿರಾದಾರ ಅವರ ಸ್ಮರಣಾರ್ಥ ದಯಾನಂದಗೌಡ ಬಿರಾದಾರ, ಲಿಂ.ಬಸಪ್ಪ ಲೋಣಿ ಅವರ ಸ್ಮರಣಾರ್ಥ ಬಂಡೆಪ್ಪ ಲೋಣಿ, ಲಿಂ.ಶಂಭುಲಿಂಗಯ್ಯ ಮಠ ಹಾಗೂ ಧರ್ಮಪತ್ನಿ ವಿಮಲಾ ಮಠ ಅವರ ಸ್ಮರಣಾರ್ಥ ಸುಧಾರಾಣಿ ಮಠ ಅವರು ನೆರವೇರಿಸಿದರು.
ಕಾರ್ಯಕ್ರದಲ್ಲಿ ಶಕುಂತಲಾ ಹಿರೇಮಠ, ಚನ್ನಪ್ಪ ಕತ್ತಿ, ಮುಕ್ತಾಯಕ್ಕ ಕತ್ತಿ, ಹೇಮಾ ಹಿರೇಮಠ, ಮಂಗಳಾ ಈಳಗೇರ, ಉಮೇಶ ಪೂಜೇರಿ, ಜಿ.ಎ.ನಂದಿಮಠ, ಮಹಾಂತೇಶ ನೂಲಾನವರ, ಬಸಮ್ಮ ಧರಿ, ವಿರೇಶ ಜೋಗುರ, ಚನ್ನು ಕತ್ತಿ ಸೇರಿದಂತೆ ಶ್ರೀಮಠ ಭಕ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.