ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಜ೧೬ ರಂದು ಬೆಳಿಗ್ಗೆ ೧೦ರಿಂದ ೧ ರವರೆಗೆ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
