ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರ ರಾಣಿ ಚನ್ನಮ್ಮ/ ಡಾ.ಬಿ.ಆರ್.ಅಂಬೇಡ್ಕರ್ / ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನ ೬ನೇ ತರಗತಿಯ ಪ್ರವೇಶ ಪರೀಕ್ಷೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಜನವರಿ ೨೫ರ ರಾತ್ರಿ ೧೧.೫೯ರ ವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರವೇಶ ಪತ್ರವನ್ನು ಫೆಬ್ರವರಿ ೬ರಂದು ಆನ್‌ಲೈನ್ ನಲ್ಲಿ ಪಡೆದುಕೊಳ್ಳಬಹುದು. ಫೆ. ೧೫ರಂದು ಮದ್ಯಾಹ್ನ ೨.೩೦ ರಿಂದ ೪.೩೦ರ ವರೆಗೆ ಪ್ರವೇಶ ಪರೀಕ್ಷೆಗಳು ನಡೆಯಲಿವೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಆದಾಯ ಮಿತಿ ಪ.ಜಾತಿ/ ಪ.ಪಂಗಡ, ಹಿ.ವರ್ಗದ ಪ್ರವರ್ಗ-೧ ೨.೫೦.೦೦೦/- ಹಾಗೂ ಹಿಂ.ವರ್ಗ ೨ಎ,೨ಬಿ, ೩ಎ ಮತ್ತು ೩ಬಿ ವಿದ್ಯಾರ್ಥಿಗಳ ಆದಾಯ ಮಿತಿ ೧.೦೦.೦೦೦/- ಮಿರಿರಬಾರದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ/ ಕಿತ್ತೂರ ರಾಣಿ ಚನ್ನಮ್ಮ/ ಡಾ.ಬಿ.ಆರ್.ಅಂಬೇಡ್ಕರ್/ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಿಗೆ ಹಾಗೂ http://kea.kar.nic.in ªÀÄvÀÄÛ http://kreis.kar.nic.inವೆಬ್‌ಸೈಟ್ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
