ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಜ.೧೯ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತ ಪೂರ್ವಭಾವಿ ಸಭೆಯನ್ನು ಜ.೧೭ರ (ಇಂದು) ಬೆಳಿಗ್ಗೆ ೧೦.೩೦ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ, ಜಿಲ್ಲಾ ಖಜಾನೆಯ ಉಪ ನಿರ್ದೇಶಕ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಆಡಳಿತ), ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ, ತಹಶೀಲ್ದಾರ, ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ, ವೀಕ್ಷಕರು, ಪ್ರಶ್ನೇ ಪತ್ರಿಕೆ ವಿತರಣಾ ತಂಡ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕ, ಮಾರ್ಗಾಧಿಕಾರಿ, ಸ್ಥಾನಿಕ ಜಾಗೃತ ದಳದವರು ಹಾಗೂ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೋಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
