ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದ್ದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈತರು ಹಾಗೂ ಗ್ರಾಹಕರರೊಂದಿಗೆ ಜ.೧೮ರ ಬೆಳಿಗ್ಗೆ ೧೧ಗಂಟೆಗೆ ಸಂವಾದ ಸಭೆಯನ್ನು ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ ಕಛೇರಿಯಲ್ಲಿ ನಡೆಸಲಾಗುವುದು.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೆಸ್ಕಾಂ ಗ್ರಾಮೀನ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
