ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಕಚೇರಿಯ ಜಿಲ್ಲಾಧಿಕಾರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ವಿವರಗಳನ್ನು www.vijayapur.nic.inವೆಬ್ ಸೈಟ್‌ನಲ್ಲಿ ನೋಡಬಹುದಾಗಿದೆ.
ಆಯ್ಕೆ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಜನವರಿ ೧೬ರಿಂದ ೨೩ರ ವರೆಗೆ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ.
ನಿಗದಿಪಡಿಸಿದ ದಿನಾಂಕ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧ್ಯಕ್ಷರು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದಾರೆ.
