Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸ್ ನಿಲುಗಡೆಗೆ ಆಗ್ರಹಿಸಿ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಸ್ ನಿಲುಗಡೆಗೆ ಆಗ್ರಹಿಸಿ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಯರಗಲ್ ಕೆಡಿ ಗ್ರಾಮದಲ್ಲಿ ೨ ಸಾವಿರಕ್ಕೂ ಅಧಿಕ ಜನರು ವಾಸಿಸುತ್ತಾರೆ. ಸುತ್ತಲಿನ ಹತ್ತಾರು ಹಳ್ಳಿಯ ಮಕ್ಕಳು ಶಾಲಾ-ಕಾಲೇಜಿಗೆ ಕಲಿಯಲು ಆಗಮಿಸುತ್ತಾರೆ. ಗ್ರಾಮದಿಂದ ನಿತ್ಯ ನೂರಾರು ಕೂಲಿ ಕಾರ್ಮಿಕರು ಬೇರೆಡೆಗೆ ದುಡಿಯಲು ಹೋಗುತ್ತಾರೆ ಎಂದು ರೈತ ಸಂಘ ರಾಜ್ಯ ಕಾರ್ಯದರ್ಶಿ ಪೀರು ಕೆರೂರ ಹೇಳಿದರು.
ಸಿಂದಗಿ ತಾಲೂಕಿನ ಯರಗಲ್ ಕೆ.ಡಿ.ಗ್ರಾಮಸ್ಥರು ಬಸ್ ನಿಲುಗಡೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ವಿಜಯಪುರ ವಿಭಾಗದ ಬಸ್‌ಗಳು ಮಾತ್ರ ಗ್ರಾಮದಲ್ಲಿ ನಿಲುಗಡೆಯಾಗುತ್ತಿದ್ದು, ಕಲಬುರಗಿ ವಿಭಾಗದ ಬಸ್‌ಗಳನ್ನು ನಿಲ್ಲಿಸುತ್ತಿಲ್ಲ. ಈಗಾಗಲೇ ಸಿಂದಗಿ, ವಿಜಯಪುರ, ಲಬುರಗಿ ಸಾರಿಗೆ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿ ಅನೇಕ ದಿನಗಳಾಗಿವೆ. ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದೇ ಇರುವುದರಿಂದ ಪ್ರತಿಭಟನೆ ಅನಿವಾರ್ಯವಾಗಿದೆ. ತಮಗೆ ಒಂದು ವಾರ ಗಂಡುವು ನೀಡುತ್ತೇವೆ. ಅಷ್ಟರಲ್ಲಿ ನಮ್ಮ ಸಮಸ್ಯೆ ಪರಿಹರಿಸದಿದ್ದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಸಾರಿಗೆ ಬಸ್ ನಿಲುಗಡೆಗೆ ಆಗ್ರಹಿಸಿ ಸಿಂದಗಿ ತಾಲೂಕಿನ ಯರಗಲ್ ಕೆ.ಡಿ.ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.
ವಿಷಯ ತಿಳಿದ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ನಿಲುಗಡೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ನೂರಾರು ಗ್ರಾಮಸ್ಥರು, ಮಹಿಳೆಯರು ಸಾರಿಗೆ ಇಲಾಖೆ ವಿರುದ್ಧ ಹರಿಹಾಯ್ದರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಿಂದಗಿ ಪಿಎಸ್ ಆರೀಫ್ ಮುಶಾಫಿರ್, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದರು.
ತಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿ ಶಾಂತತೆ ಕಾಪಾಡಲು ವಿನಂತಿಸಿದರು. ಸಿಪಿಐ ಕೂಡ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರನ್ನು ನಿಯಂತ್ರಿಸಿದರು.
ಸಿಂದಗಿ ಡಿಪೋ ಮ್ಯಾನೇಜರ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ಭರವಸೆ ನೀಡುತ್ತಿದ್ದಂತೆ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಚಂದ್ರಮ ಯಂಕಂಚಿ, ರಾಮಚಂದ್ರ ಸೊನ್ನದ, ಪೀರಪ್ಪ ಯಂಕಂಚಿ, ಪರುವ ಯಂಕಂಚಿ, ವಿಶ್ವಾನಾಥ ಯಂಕಂಚಿ, ರಾಮಚಂದ್ರ ಹುಡೇದ, ಮುತ್ತಣ್ಣ ಯಂಕಂಚಿ, ಸಂಜು ಹೊಸಮನಿ, ಭೀಮಣ್ಣ ಹೊಸಮನಿ, ರಾಜು ಹೊಸಮನಿ, ರೇವಪ್ಪ ಹೊಸಮನಿ, ದುಳಪ್ಪ ಹೊಸಮನಿ ಸೇರಿದಂತೆ ಗ್ರಾಮಸ್ಥರು ಇದ್ದರು.

“ತಂತ್ರಜ್ಞಾನದ ಮೂಲಕ ನಿಮ್ಮ ಗ್ರಾಮದ ಹೆಸರನ್ನು ಕೂಡಲೇ ಸಂಬಂಧಿಸಿದ ಡಿಪೋಗಳಲ್ಲಿ ಸೇರಿಸಿ ನಿಲುಗಡೆಗೆ ವ್ಯವಸ್ಥೆ ಕೈಗೊಳ್ಳಲಾಗುವುದು. ಈ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಒಂದು ವಾರದಲ್ಲಿ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲಾಗುವುದು.”

– ರೇವಣಸಿದ್ದಪ್ಪ ಕೈನೂರ
ಡಿಪೋ ಮ್ಯಾನೇಜರ್

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.