ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕು ಮಟ್ಟದ ಜ.೨೬ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಣೆ ಮಾಡಲೂ ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸರಕಾರಿ ಕಚೇರಿ, ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಚತೆಯೊಂದಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮ ಸ್ಥಳದ ಸ್ವಚ್ಚತೆ ಹಾಗೂ ಅತಿಥಿಗಳಿಗೆ ಆಸನದ, ಅಲ್ಪೋಪಹಾರದ ವ್ಯವಸ್ಥೆಗೆ ಕ್ರಮ ವಹಿಸಿಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರಿಗೆ ಸಮಯಕ್ಕಿಂತ ಮುಂಗಡವಾಗಿ ತಲುಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ, ಮೂಲಭೂತ ಸೌಲಭ್ಯ ವ್ಯವಸ್ಥೆ, ವೇದಿಕೆ ನಿರ್ಮಾಣ ಸೇರಿದಂತೆ ಮುಂತಾದ ವಿಚಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕೃಷಿ ಸಾಹಾಯಕ ನಿರ್ದೇಶಕ ಹೆಚ್.ವೈ.ಸಿಂಗೆಗೋಳ, ಬಿಇಒ ಮಹಾಂತೇಶ ಯಡ್ರಾಮಿ, ಉಪ ನೋಂದಣಾಧಿಕಾರಿ ಎಂ.ಆರ್,ಪಾಟೀಲ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್.ಕೋರವಾರ ಹೆಸ್ಕಾಂ ಅಧಿಕಾರಿ ಮಲಕಣ್ಣ ಜಾಲಿಬೆಂಚಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

