Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಬಸವ ಭಕ್ತರಲ್ಲಿ ಮೂರ್ತಿ ಪೂಜೆ ನಿಷೇಧ
ವಿಶೇಷ ಲೇಖನ

ಬಸವ ಭಕ್ತರಲ್ಲಿ ಮೂರ್ತಿ ಪೂಜೆ ನಿಷೇಧ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ- ಪ್ರೊ ಶಾರದಾ ಪಾಟೀಲ ಬದಾಮಿ

ಉದಯರಶ್ಮಿ ದಿನಪತ್ರಿಕೆ

ಬಸವ ಭಕ್ತರು ಮೂರ್ತಿ ಪೂಜೆ ವಿರೋಧಿಗಳು, ಭಕ್ತನು ತನ್ನೊಳಗಿನ ಜಂಗಮ ಚೈತನ್ಯವನ್ನೇ ದೈವೀ ಸಾಕ್ಷಿ ಪ್ರಜ್ಞೆ ಮಾಡಿಕೊಂಡರು. ಶರಣರು ಚಲನಶೀಲತೆಯುಳ್ಳ ಸಕಲ ಜೀವಿಗಳನ್ನು ದೇವರೆಂದು ಕರೆದರು.
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಸ್ಥಾವರ ದೈವಕ್ಕೆರಗಲಾಗದು.
ಭಕ್ತ ಅಷ್ಟಾವರಣ ಸಂಪನ್ನನಾಗಿ ಪಂಚಾಚಾರ ಆಚರಿಸಿ ಷಟಸ್ಥಲ ಮಾರ್ಗದ ಉನ್ನತ ಸ್ಥಾನವನ್ನು ಪಡೆದು ಮತ್ತೆ ಸ್ಥಾವರ ದೈವಕ್ಕೆರಗಲಾಗದು ಅದು ಲಿಂಗ ದ್ರೋಹ ಜಂಗಮ ದ್ರೋಹ.

ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ
ಸ್ಥಾವರದೈವಕ್ಕೆರಗಲಾಗದು.
ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ
ಕರಸ್ಥಲದ ದೇವನಿದ್ದಂತೆ
ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ
ನರಕದಲ್ಲಿಕ್ಕುವ ಕೂಡಲಸಂಗಮದೇವ. – 1/962

ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ,
ಮರಳಿ ಅನ್ಯದೈವಂಗಳನಾರಾಧಿಸುವ ಕುನ್ನಿಗಳು ನೀವು ಕೇಳಿಭೋ
ವಿಷ್ಣುವೇ ದೈವವೆಂದು ಆರಾಧಿಸಿದ ಬಲಿಗೆ ಬಂಧನವಾಯಿತ್ತು.
ವಿಷ್ಣುವೇ ದೈವವೆಂದು ಆರಾಧಿಸಿದ ಕರ್ಣನ ಕವಚ ಹೋಯಿತ್ತು.
ವಿಷ್ಣುವೇ ದೈವವೆಂದು ಆರಾಧಿಸಿದ ನಾಗಾರ್ಜುನನ ಶಿರ ಹೋಯಿತ್ತು.
ಅದಂತಿರಲಿ,
ಬ್ರಾಹ್ಮಣನೇ ದೈವವೆಂದು ಆರಾಧಿಸಿದ ಗೌತಮಂಗೆ ಗೋವಧೆಯಾಯಿತ್ತು.
ಬ್ರಾಹ್ಮಣನೇ ದೈವವೆಂದು ಆರಾಧಿಸಿದ ದಕ್ಷಂಗೆ ಕುರಿದಲೆಯಾಯಿತ್ತು.
ಮೈಲಾರನೇ ದೇವರೆಂದಾರಾಧಿಸಿದಾತನು
ಕೊರಳಲ್ಲಿ ಕವಡೆಯ ಕಟ್ಟಿ, ನಾಯಾಗಿ ಬೊಗಳುತಿರ್ಪ.
ಭೈರವನೇ ದೇವರೆಂದಾರಾಧಿಸಿದಾತನು
ಕೊರಳಲ್ಲಿ ಕವಡೆಯ ಕಟ್ಟಿ, ಕರುಳ ಬೆರಳ ಕಡಿದಿಕ್ಕಿ, ಬಾಹಿರನಾದನು.
ಮಾಯಿರಾಣಿಯೇ ದೈವವೆಂದು ಆರಾಧಿಸಿದಾತನು
ಕೊರಳಿಗೆ ಕವಡಿಯ ಕಟ್ಟಿ, ತಲೆಯಲ್ಲಿ ಕೆರಹ ಹೊತ್ತು,
ಬೇವಿನ ಸೊಪ್ಪನುಟ್ಟು ಲಜ್ಜೆಯ ನೀಗಿದ.
ಈ ಬಿನುಗು ದೈವಂಗಳ ಭಕ್ತಿ ಬಣಗು ನಾಯಿ ಒಣಗಿದೆಲುವ ಕಚ್ಚಿಕೊಂಡು
ಕಂಡ ಕಂಡೆಡೆಗೆ ಹರಿದಂತಾಯಿತ್ತು,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ. – ಉರಿಲಿಂಗಪೆದ್ದಿ 1266

ಅಂಗದ ಮೇಲೆ ಲಿಂಗಸಾಹಿತ್ಯದ ಬಳಿಕ ಸ್ಥಾವರಲಿಂಗವ ಪೂಜಿಸಬಾರದು

ಶರಣರು ಪೂಜೆ ನೇಮಗಳಿಗೆ ಮಹತ್ವವನ್ನು ಕೊಟ್ಟಿಲ್ಲ , ಕಾಯಕವೇ ಪೂಜೆ ಎಂದರು ಶರಣರುಸಮಯೋಚಿತ ಲಿಂಗ ಪೂಜೆ ಸಾಂದರ್ಭಿಕ ಜಂಗಮ ಸೇವೆ ಎಂದು ತಿಳಿದು ಕಾಯಕ ದಾಸೋಹ ಮಾರ್ಗವನ್ನು ಶ್ರೇಷ್ಠವೆಂದು ಕರೆದರು ಶರಣರು.

ತನ್ನ ಪುರುಷನ ಬಿಟ್ಟು ಅನ್ಯಪುರುಷರ ಸಂಗ ಸಲ್ಲುವುದೆ ?
ಕರಸ್ಥಲದಲ್ಲಿ ಲಿಂಗದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ
ನರಕದಲ್ಲಿಕ್ಕುವ ನಮ್ಮ ಕೂಡಲಚೆನ್ನಸಂಗಮದೇವಾ !

ಅಂಗದ ಮೇಲೆ ಲಿಂಗವ ಧರಿಸಿ
ಲಿಂಗವಂತರೆನಿಸಿಕೊಂಬ ಮಹಾಲಿಂಗವಂತರು ನೀವು ಕೇಳಿರೊ.
ಮನೆಗೊಂದು ದೈವ, ನಿಮಗೊಂದು ದೈವ.
ನಿಮ್ಮಂಗನೆ ಅನ್ಯದೈವಕ್ಕೆಂದು ನಿಯಾಮಿಸಿ ಮಾಡಿದ ಪಾಕವ,
ನಿಮ್ಮ ಇಷ್ಟಲಿಂಗಕ್ಕೆ ಕೊಟ್ಟು ಭುಂಜಿಸುತ್ತಿರ್ದು,
ಮತ್ತೆ ಮರಳಿ ಲಿಂಗವಂತರೆನಿಸಿಕೊಂಬ ಲಿಂಗದ್ರೋಹಿಗಳಿಗೆ
ಕುಂಭೀಪಾತಕ, ನಾಯಕನರಕ ತಪ್ಪದೆಂದ ಕಲಿದೇವಯ್ಯ.- ಮಡಿವಾಳ ಮಾಚಿದೇವ 439

ಉಣ್ಣದ ಮೂರ್ತಿಗಿಂತ ಉಂಬುವ ಜೀವಕ್ಕೆ ಆಹಾರ ನೀಡುವುದು ಲೇಸು
ಹಾಲು ತುಪ್ಪ ಜೇನು ಅನ್ನ ಮುಂತಾದ ಖಾದ್ಯ ವಸ್ತುಗಳನ್ನು ಕಲ್ಲು ದೇವರ ಹೆಸರಲ್ಲಿ
ನೈವೇದ್ಯ ಪ್ರಸಾದವೆಂದು ಅನಗತ್ಯ ಹಾಳು ಮಾಡಬಾರದು ಎಂದಿದ್ದಾರೆ ಶರಣರು .
ಕಲ್ಲನಾಗರ ಕಂಡಡೆ ಹಾಲನೆರೆಯೆಂಬರು,
ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ,
ಉಂಬ ಜಂಗಮ ಬಂದಡೆ ನಡೆಯೆಂಬರು,
ಉಣ್ಣದ ಲಿಂಗಕ್ಕೆ ಬೊನವ ಹಿಡಿಯೆಂಬರಯ್ಯಾ,
ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ,
ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ. – ಬಸವಣ್ಣ ಸವಸ1/194

ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಕ್ಷೇತ್ರತೀರ್ಥಕ್ಕೆ ಹೋಗಬಾರದು
ಬಸವ ಭಕ್ತನಾದವನು ಅಂಗದ ಮೇಲೆ ಲಿಂಗ ಸಾಹಿತ್ಯವನ್ನು ಹೊಂದಿದವರು ಕಾಶಿ ರಾಮೇಶ್ವರ ಶಿರಡಿ ಮುಂತಾದ ಕಡೆಗೆ ಹೋಗುವುದು ಅಪರಾಧವೆಂದಿದ್ದಾರೆ ಶರಣರು
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಕ್ಷೇತ್ರತೀರ್ಥಕ್ಕೆ ಹೋಗಲೇಕಯ್ಯ!
ಅಂಗದ ಮೇಲಣ ಲಿಂಗ [ರಂಗದ] ಕಲ್ಲ ತಾಗಿದರೆ
ಆವುದ ಘನವೆಂಬೆನಾವುದ ಕಿರಿದೆಂಬೆ!
ತಾಳ ಸಂಪುಟಕ್ಕೆಬಾರದ ಘನವನರಿಯದೆ ಕೆಟ್ಟರು.
ಜಂಗಮದರ್ಶನ ಶಿರಮುಟ್ಟಿ ಪಾವನ, ಲಿಂಗದರ್ಶನ ಕರಮುಟ್ಟಿ ಪಾವನ.
ಹತ್ತರಿದ್ದ ಲಿಂಗವ ಹುಸಿಮಾಡಿ, ದೂರಲಿದ್ದ ಲಿಂಗಕ್ಕೆ ನಮಸ್ಕರಿಸುವ
ವ್ರತಗೇಡಿಯ ತೋರದಿರಯ್ಯಾ!
ಕೂಡಲಚೆನ್ನಸಂಗಯ್ಯಾ. – ಚೆನ್ನಬಸವಣ್ಣ 77

ಬಾಕ್ಸ್

ಆಕರ

ಈ ತರಹದ ಸಂಖ್ಯೆಯ ವಿವರ: ಸವಸ-1/628 :- ಸಮಗ್ರ ವಚನ ಸಂಪುಟ -೧, ವಚನ ಸಂಖ್ಯೆ-628 (೧೫ ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು)

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.