ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಮತಕ್ಷೇತ್ರದ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ತಾಲೂಕಿನ ಹಿಕ್ಕಣಗುತ್ತಿ ಗ್ರಾಮದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲಕ್ಕಾಗಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ನಿರ್ಮಿಸಲು ರೂ..೫೭ ಕೋಟಿ ಅನುದಾನವನ್ನು ಮತ್ತು ಸಿಂದಗಿ ಪಟ್ಟಣದಲ್ಲಿ ಮೌಲಾನಾ ಅಜಾದ್ ಮಾದರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ರೂ.೫ಕೋಟಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಶೈಕ್ಷಣಿಕ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಹೊಸ ಆಯಾಮವನ್ನು ನೀಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು ಸಿಂದಗಿ ಮತಕ್ಷೇತ್ರ ಶಿಕ್ಷಣದಿಂದ ವಂಚಿತವಾಗಬಾರದು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ಅಲ್ಪಸಂಖ್ಯಾಯತ ಕಲ್ಯಾಣ ಇಲಾಖೆಯ ಅಡಿಯಲ್ಲಿ ಎರಡು ನೂತನ ಕಟ್ಟಡ ಕಟ್ಟುವಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತ-ದೃಷ್ಟಿಯಿಂದ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಲಾಗುವುದು. ರಾಜ್ಯ ಸರ್ಕಾರಕ್ಕೆ ಮತ್ತು ಸಂಬಂಧಿಸಿದ ಸಚಿವರಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

